Witnesses welcoming neighbors into a bright gathering while clear water flows through the courtyard

1 ಯೋಹಾನನು 1

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಓದುಗರು ಅನ್ಯೋನ್ಯತೆ ಮತ್ತು ಪೂರ್ಣ ಸಂತೋಷದಲ್ಲಿ ಪಾಲುಗೊಳ್ಳುವಂತೆ ಈ ಪತ್ರವು ಸ್ಪರ್ಶಿಸಬಹುದಾದ ಜೀವವಾಕ್ಯವನ್ನು ಪ್ರಕಟಿಸುತ್ತದೆ. ದೇವರು ಬೆಳಕಾಗಿರುವುದರಿಂದ ನಿಜವಾದ ಅನ್ಯೋನ್ಯತೆಯು ಗುಪ್ತ ಕತ್ತಲೆಯನ್ನು ತಿರಸ್ಕರಿಸಿ, ಬಹಿರಂಗವಾಗಿ ನಡೆದು, ಪಾಪವನ್ನು ಅರಿಕೆ ಮಾಡಿ, ದೇವರ ನಂಬಿಗಸ್ತ ಕ್ಷಮಾಪಣೆ ಮತ್ತು ಶುದ್ಧೀಕರಣವನ್ನು ನಂಬುತ್ತದೆ.
ಜೀವವಾಕ್ಯಅನ್ಯೋನ್ಯತೆಬೆಳಕುಅರಿಕೆ
1ಆದಿಯಿಂದ ಇರುವಂಥದ್ದೂ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದ ಆ ಜೀವವಾಕ್ಯವನ್ನೇ ಸಾರುತ್ತಿದ್ದೇವೆ.
2ಈ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು, ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ.
3ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು.
4ನಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತಿದ್ದೇವೆ.
5ನಾವು ಕ್ರಿಸ್ತ ಯೇಸುವಿನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವುದೆಂದರೆ: ದೇವರು ಬೆಳಕಾಗಿದ್ದಾರೆ, ಅವರಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ, ಎಂಬುದೇ.
6ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೂ ಸುಳ್ಳಾಡುವವರಾಗಿದ್ದರೆ, ನಾವು ಸತ್ಯವನ್ನು ಅನುಸರಿಸುವವರಲ್ಲ.
7ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
8ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
9ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
10ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ. ಅವರ ವಾಕ್ಯವು ನಮ್ಮಲ್ಲಿ ಬಾಳುವುದಿಲ್ಲ.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.