Mordecai listening to families and elders at the palace gate above a flourishing landscape

ಎಸ್ತೇರಳು 10

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಅರಸನ ಶಕ್ತಿ ಮತ್ತು ಮೊರ್ದೆಕೈಯ ಎರಡನೆಯ ಸ್ಥಾನಕ್ಕೆ ಬಡ್ತಿಯನ್ನು ಗಮನಿಸುವುದರೊಂದಿಗೆ ಪುಸ್ತಕ ಮುಗಿಯುತ್ತದೆ. ಮೊರ್ದೆಕೈ ತನ್ನ ಜನರ ಹಿತವನ್ನು ಬಯಸಿ ಮುಂದಿನ ತಲೆಮಾರುಗಳಿಗೆ ಶಾಂತಿಯನ್ನು ಮಾತನಾಡುವುದರಿಂದ ಯೆಹೂದ್ಯರ ನಡುವೆ ಗೌರವಿಸಲ್ಪಡುತ್ತಾನೆ.
ಮೊರ್ದೆಕೈನಾಯಕತ್ವಸಾರ್ವಜನಿಕ ಸೇವೆಹಿತಶಾಂತಿ
1ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.
2ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿದ್ಧಿಯೂ ಮೇದ್ಯ ಮತ್ತು ಪಾರಸಿಯ ಅರಸರ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ.
3ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.