Cushite envoys traveling in reed boats toward a distant mountain marked by a raised signal banner

ಯೆಶಾಯ 18

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಎಲ್ಲಾ ಜನಾಂಗಗಳು ಪರ್ವತದ ಸಂಕೇತಕ್ಕಾಗಿ ನೋಡುತ್ತಿರುವಾಗ ಕೂಷಿನ ನದಿಗಳ ಆಚೆಯ ನಾಡಿನಿಂದ ವೇಗದ ದೂತರು ಪ್ರಯಾಣಿಸುತ್ತಾರೆ. ದೇವರು ಸರಿಯಾದ ಕ್ಷಣದವರೆಗೆ ಶಾಂತವಾಗಿ ಗಮನಿಸಿ, ನಂತರ ಮಹತ್ವಾಕಾಂಕ್ಷೆಗಳನ್ನು ಕತ್ತರಿಸಿ ಚೀಯೋನಿನಲ್ಲಿ ಕಪ್ಪವನ್ನು ಸ್ವೀಕರಿಸುತ್ತಾನೆ.
ಜನಾಂಗಗಳುಸಾರ್ವಭೌಮತ್ವತಾಳ್ಮೆಚೀಯೋನ್
1ಕೂಷ್ ನದಿಯ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡಿಗೆ ಕಷ್ಟ!
2ಇದು ಆಪಿನ ದೋಣಿಗಳಲ್ಲಿ ಸಮುದ್ರ ಮಾರ್ಗದಿಂದ ರಾಯಭಾರಿಗಳನ್ನು ನೀರಿನ ಮೇಲೆ ಕಳುಹಿಸುತ್ತದೆ. ಶೀಘ್ರವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನುಣುಪಾದ ಚರ್ಮವುಳ್ಳ ಜನರ ಬಳಿಗೂ, ಸರ್ವರಿಗೂ ಭಯಪ್ರಧರಾಗಿರುವ ಜನರ ಬಳಿಗೂ, ವಿಚಿತ್ರ ಭಾಷೆಯಿರುವ ಹಾಗೂ ನದಿಗಳಿಂದ ವಿಂಗಡವಾಗಿರುವ ಆಕ್ರಮಣಕಾರಿ ರಾಷ್ಟ್ರದವರ ಬಳಿಗೂ ಹೋಗಿರಿ.
3ಜಗದ ಸಕಲ ನಿವಾಸಿಗಳೇ! ಭೂಮಿಯಲ್ಲಿ ವಾಸಿಸುವವರೇ! ಬೆಟ್ಟಗಳ ಮೇಲೆ ಧ್ವಜವನ್ನು ಎತ್ತುವಾಗ ಅದನ್ನು ನೀವು ನೋಡುವಿರಿ, ತುತೂರಿಯನ್ನು ಊದುವಾಗ ಕೇಳಿಸಿಕೊಳ್ಳುವಿರಿ.
4ಯೆಹೋವ ದೇವರು ನನಗೆ ಹೀಗೆ ಹೇಳಿದರು, “ನಾನು ನನ್ನ ವಿಶ್ರಾಂತಿಯನ್ನು ತೆಗೆದುಕೊಳ್ಳುವೆನು. ಬಿಸಿಹಗಲಿನ ಸೂರ್ಯನಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದಂತೆಯೂ ನಾನು ನನ್ನ ನಿವಾಸಸ್ಥಾನದಲ್ಲಿ ಸುಮ್ಮನೆ ನೋಡುತ್ತಿರುವೆನು.”
5ಏಕೆಂದರೆ ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷಿ ಕಾಯಿಯಾಗುವಾಗ ಅವರು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ, ಚಿಗುರುಗಳನ್ನು ಕಡಿದುಹಾಕುವರು.
6ಅವುಗಳೆಲ್ಲ ಬೆಟ್ಟದ ಹದ್ದುಗಳಿಗೂ, ಭೂಮಿಯ ಮೃಗಗಳಿಗೂ ಆಹಾರವಾಗುವುವು. ಅದು ಪಕ್ಷಿಗಳಿಗೆ ಬೇಸಿಗೆ ಕಾಲದಲ್ಲಿಯೂ, ಕಾಡುಮೃಗಗಳಿಗೆ ಚಳಿಗಾಲದಲ್ಲಿಯೂ ಆಹಾರವಾಗುವುದು.
7ಆಗ ಎತ್ತರವಾದ ಹಾಗೂ ನುಣುಪು ಚರ್ಮವುಳ್ಳ ಜನರಿಂದಲೂ, ಸರ್ವರಿಗೂ ಭಯಪ್ರಧರಾದ ಜನರಿಂದಲೂ, ವಿಚಿತ್ರ ಭಾಷೆಯಿಂದ ಹಾಗೂ ನದಿಗಳಿಂದ ವಿಂಗಡವಾಗಿರುವ ಆಕ್ರಮಣಕಾರಿ ಜನರಿಂದಲೂ ಸರ್ವಶಕ್ತರಾದ ಯೆಹೋವ ದೇವರಿಗೆ ಕಾಣಿಕೆಗಳು ತರಲಾಗುವುದು. ಹೌದು, ಸೇನಾಧೀಶ್ವರ ಯೆಹೋವ ದೇವರ ಹೆಸರುಳ್ಳ ಚೀಯೋನ್ ಪರ್ವತಕ್ಕೆ ಕಾಣಿಕೆಗಳು ತರಲಾಗುವುದು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.