Barefoot Isaiah in a modest linen garment warning Jerusalem's leaders as fully clothed captives pass nearby

ಯೆಶಾಯ 20

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಐಗುಪ್ತ ಮತ್ತು ಕೂಷಿನ ವಿರುದ್ಧ ಸೂಚನೆಯಾಗಿ ಯೆಶಾಯನು ಮೂರು ವರ್ಷ ಬರಿಗಾಲಿನಲ್ಲಿ ಸರಳ ಬಟ್ಟೆಯಲ್ಲಿ ನಡೆಯುತ್ತಾನೆ. ಅವರ ಮುಂಬರುವ ಸೆರೆಯು ಯೆಹೂದದ ನಿರೀಕ್ಷಿತ ಮಿತ್ರರು ರಕ್ಷಿಸಲಾರರೆಂದು ತೋರಿಸಿ, ಅವರಲ್ಲಿ ಭರವಸೆಯಿಟ್ಟವರನ್ನು ದಿಗ್ಭ್ರಮೆಗೊಳಿಸುತ್ತದೆ.
ಎಚ್ಚರಿಕೆಭರವಸೆಪ್ರವಾದನಾ ಸೂಚನೆಮೈತ್ರಿಗಳು
1ಅಸ್ಸೀರಿಯದ ಅರಸನಾದ ಸರ್ಗೋನನು ಕಳುಹಿಸಿದ ವರ್ಷದಲ್ಲಿ ಪ್ರಮುಖ ಸೇನಾಪತಿ, ಅಷ್ಡೋದಿಗೆ ಬಂದು ಅದನ್ನು ಮುತ್ತಿಗೆ ಹಾಕಿ ಆಕ್ರಮಿಸಿಕೊಂಡನು.
2ಅದೇ ಸಮಯದಲ್ಲಿ ಯೆಹೋವ ದೇವರು ಆಮೋಚನ ಮಗ ಯೆಶಾಯನಿಗೆ, “ನಿನ್ನ ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಕೆರಗಳನ್ನು ತೆಗೆದಿಡು,” ಎಂದು ಹೇಳಿದರು. ಅವನು ಹಾಗೆ ಮಾಡಿ, ಬೆತ್ತಲೆಯಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.
3ಆಗ ಯೆಹೋವ ದೇವರು, “ನನ್ನ ಸೇವಕನಾದ ಯೆಶಾಯನು ಈಜಿಪ್ಟ್ ಮತ್ತು ಕೂಷಿಗು, ಗುರುತಾಗಿಯೂ, ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.
4ಹಾಗೆಯೇ ಅಸ್ಸೀರಿಯದ ಅರಸನು ಈಜಿಪ್ಟಿನವರನ್ನು ಬಂಧಿಸಿ, ಕೂಷಿನ ಕೈದಿಗಳನ್ನು ಅವರು ದೊಡ್ಡವರಾಗಲೀ, ಸಣ್ಣವರಾಗಲೀ ಬಟ್ಟೆ, ಕೆರಗಳಿಲ್ಲದೆ ಈಜಿಪ್ಟಿನ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.
5ಆಗ ನನ್ನ ಜನರು ಅವನು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಳ್ಳುತ್ತಿದ್ದ ಈಜಿಪ್ಟಿನ ವಿಷಯವಾಗಿಯೂ, ನಿರಾಶರಾಗಿ ನಾಚಿಕೆಪಡುವರು.
6ಆ ದಿನದಲ್ಲಿ ಕರಾವಳಿಯ ನಿವಾಸಿಗಳು, ‘ಇಗೋ, ಅಸ್ಸೀರಿಯದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ, ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?’ ಎಂದುಕೊಳ್ಳುವರು.”

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.