Worshipers from varied backgrounds welcomed through Jerusalem's open temple gates with offerings and sheep

ಯೆಶಾಯ 56

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ದೇವರು ಜನರನ್ನು ನ್ಯಾಯಕ್ಕೂ ನಂಬಿಗಸ್ತ ಸಬ್ಬತ್ ಆಚರಣೆಗೂ ಕರೆದು, ಎಲ್ಲಾ ಜನರಿಗಾಗಿ ಪ್ರಾರ್ಥನೆಯ ಮನೆಯಲ್ಲಿ ಪರದೇಶಿಗಳಿಗೂ ನಪುಂಸಕರಿಗೂ ಗೌರವದ ಸ್ಥಾನವನ್ನು ವಾಗ್ದಾನ ಮಾಡುತ್ತಾನೆ. ಈ ಅಧ್ಯಾಯವು ತಮ್ಮ ಮಂದೆಯನ್ನು ನಿರ್ಲಕ್ಷಿಸುವ ಕುರುಡ, ಸ್ವಾರ್ಥಿ ನಾಯಕರನ್ನೂ ಗದರಿಸುತ್ತದೆ.
ಒಳಗೊಳ್ಳುವಿಕೆಸಬ್ಬತ್ಪ್ರಾರ್ಥನೆನಾಯಕತ್ವ
1ಯೆಹೋವ ದೇವರು ಹೇಳುವುದೇನೆಂದರೆ: “ನ್ಯಾಯವನ್ನು ಕೈಗೊಳ್ಳಿರಿ, ನೀತಿಯಲ್ಲಿ ನಡೆಯಿರಿ. ಏಕೆಂದರೆ ನನ್ನ ರಕ್ಷಣೆಯು ಬರುವುದಕ್ಕೂ, ನನ್ನ ನೀತಿಯು ಪ್ರಕಟವಾಗುವುದಕ್ಕೂ ಸಮೀಪವಾಗಿದೆ.
2ಇದನ್ನು ಮಾಡುವ ಮನುಷ್ಯನೂ, ಇದನ್ನು ಹಿಡಿದುಕೊಳ್ಳುವವರ ಪುತ್ರನೂ ಎಂದರೆ ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಗೊಳ್ಳುವವನೂ ಮತ್ತು ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.”
3ಯೆಹೋವ ದೇವರನ್ನು ಸೇರಿಕೊಂಡ ವಿದೇಶೀಯನು, “ಯೆಹೋವ ದೇವರು ತಮ್ಮ ಜನರಿಂದ ನನ್ನನ್ನು ಖಂಡಿತವಾಗಿ ಬಹಿಷ್ಕರಿಸುವರು,” ಎಂದು ಹೇಳದಿರಲಿ. ಮತ್ತು ನಪುಂಸಕನು, “ನಾನು ಕೇವಲ ಒಣಗಿದ ಮರ,” ಎಂದು ಹೇಳದಿರಲಿ.
4ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಸಬ್ಬತ್ ದಿನವನ್ನು ಕೈಗೊಂಡು, ನನಗೆ ಮೆಚ್ಚಿಗೆಯಾದದ್ದನ್ನು ಆಯ್ದುಕೊಂಡು, ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವ ನಪುಂಸಕರಿಗೆ,
5ನನ್ನ ಆಲಯದಲ್ಲಿಯೂ ಗೋಡೆಗಳ ಬಳಿಗೂ ಪುತ್ರ ಪುತ್ರಿಯರಿಗಿಂತ ಉತ್ತಮವಾದ ಸ್ಥಳವನ್ನೂ, ಹೆಸರನ್ನೂ ನಾನು ಕೊಡುತ್ತೇನೆ. ನಾನು ಅವರಿಗೆ ಎಂದಿಗೂ ಅಳಿಯದ ಶಾಶ್ವತವಾದ ಹೆಸರನ್ನು ಕೊಡುವೆನು.
6ಯೆಹೋವ ದೇವರಾದ ನನ್ನನ್ನು ಸೇವಿಸುವುದಕ್ಕೂ, ನನ್ನ ಹೆಸರನ್ನು ಪ್ರೀತಿಸಿ, ನನಗೆ ಸೇವಕರಾಗಿರಲು ತಾವಾಗಿ ಯೆಹೋವ ದೇವರೊಂದಿಗೆ ಸೇರಿಕೊಂಡಿರುವ ವಿದೇಶಿಯರು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ, ಅದನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಭದ್ರವಾಗಿ ಪಾಲಿಸುವವರನ್ನು
7ನನ್ನ ಪರಿಶುದ್ಧ ಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವನ್ನು ಉಂಟುಮಾಡುವೆನು. ನನ್ನ ಬಲಿಪೀಠದ ಮೇಲೆ ಅವರು ಅರ್ಪಿಸುವ ದಹನಬಲಿಗಳು, ಯಜ್ಞಗಳು ನನಗೆ ಒಪ್ಪಿಗೆಯಾಗುವುವು, ಏಕೆಂದರೆ ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವು ಎಂದು ಎನಿಸಿಕೊಳ್ಳುವುದು.”
8ಇಸ್ರಾಯೇಲಿನ ಸೆರೆಹೋದ ಜನರನ್ನು ಕೂಡಿಸುವಂಥ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು.”
9ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವುದಕ್ಕೆ ಬನ್ನಿರಿ.
10ಇಸ್ರಾಯೇಲಿನ ಕಾವಲುಗಾರರು ಕುರುಡರು. ಅವರೆಲ್ಲರೂ ಅರಿವಿಲ್ಲದವರು. ಅವರೆಲ್ಲರೂ ಮೂಕ ನಾಯಿಗಳು, ಅವು ಬೊಗಳಲಾರವು, ಕನಸು ಕಾಣುತ್ತವೆ, ಬಿದ್ದುಕೊಂಡಿರುತ್ತವೆ. ನಿದ್ರೆಯನ್ನು ಪ್ರೀತಿಸುತ್ತವೆ.
11ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.
12“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು. ನಮ್ಮನ್ನು ನಾವೇ ಬೇಕಾದಷ್ಟು ಮದ್ಯದಿಂದ ತುಂಬಿಕೊಳ್ಳುವ! ನಾಳೆಯು ಈ ದಿವಸದಂತೆಯೇ ಇರುವುದು. ಅಥವಾ ಇದಕ್ಕಿಂತಲೂ ಚೆನ್ನಾಗಿರುವುದು,” ಎಂದು ಪ್ರತಿಯೊಬ್ಬನೂ ಹೇಳುತ್ತಾನೆ.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.