
ಯೆರೆಮೀಯ 45
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಯೆರೆಮೀಯನ ಮಾತುಗಳನ್ನು ದಾಖಲಿಸುವಾಗ ತಾನು ಹೊತ್ತ ದುಃಖ ಮತ್ತು ದಣಿವಿನ ಬಗ್ಗೆ ಬಾರೂಕನು ಪ್ರಲಾಪಿಸುತ್ತಾನೆ. ಇಡೀ ನಾಡು ಕದಡುವಿಕೆಯನ್ನು ಎದುರಿಸುತ್ತಿದೆ ಎಂದು ದೇವರು ಅವನಿಗೆ ನೆನಪಿಸಿ, ತನಗಾಗಿ ದೊಡ್ಡ ವಿಷಯಗಳನ್ನು ಹುಡುಕಬೇಡ ಎಂದು ಹೇಳಿ, ಅವನು ಎಲ್ಲಿಗೆ ಹೋದರೂ ಅವನ ಜೀವವು ಕಾಪಾಡಲ್ಪಡುವುದೆಂದು ವಾಗ್ದಾನ ಮಾಡುತ್ತಾನೆ.
ಬಾರೂಕದೀನತೆದಣಿವುಕಾಪಾಡುವಿಕೆ
1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ, ಸುರುಳಿಯಲ್ಲಿ ಬರೆದ ಮೇಲೆ ಪ್ರವಾದಿಯಾದ ಯೆರೆಮೀಯನು ಅವನಿಗೆ ಹೇಳಿದ ವಾಕ್ಯವೇನೆಂದರೆ,
2“ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ನಿನ್ನನ್ನು ಕುರಿತು ಹೀಗೆ ಹೇಳುತ್ತಾರೆ.
3‘ಈಗ ನನಗೆ ಕಷ್ಟ! ಏಕೆಂದರೆ, ಯೆಹೋವ ದೇವರು ನನ್ನ ನೋವಿಗೆ ಚಿಂತೆಯನ್ನು ಕೂಡಿಸಿದ್ದಾರೆ. ನಿಟ್ಟುಸಿರು ಬಿಡುವುದರಿಂದ ದಣಿದಿದ್ದೇನೆ. ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿಯಲ್ಲಾ.’
4ಆದರೆ ನಿಮಗೆ ಹೇಳಲು ಯೆಹೋವ ದೇವರು ನನಗೆ ಹೇಳಿದ್ದಾರೆ. ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ. ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.
5ಹಾಗಾದರೆ ನೀನು ನಿನಗೋಸ್ಕರ ದೊಡ್ಡವುಗಳನ್ನು ಹುಡುಕುತ್ತೀಯೋ? ಹುಡುಕಬೇಡ. ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ. ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನೀನು ಉಳಿಸಿಕೊಳ್ಳುವಂತೆ ಮಾಡುವೆನು, ಎಂದು ನಿನಗೆ ಹೇಳಿದ್ದಾರೆ,’ ಎಂದನು.”
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.