Ephraimite families surveying fertile hills and a distant fortified city

ಯೆಹೋಶುವ 16

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಯೋಸೇಫನ ವಂಶಸ್ಥರು ಯೊರ್ದನಿನಿಂದ ಆರಂಭಿಸಿ ಬೆಟ್ಟದ ಪ್ರದೇಶದ ಮೂಲಕ ಸಮುದ್ರದವರೆಗೆ ವಿಸ್ತರಿಸುವ ಪ್ರದೇಶವನ್ನು ಪಡೆಯುತ್ತಾರೆ. ಮನಸ್ಸೆಯೊಳಗಿನ ಪಟ್ಟಣಗಳು ಸೇರಿದಂತೆ ಎಫ್ರಾಯೀಮಿನ ಗಡಿಗಳನ್ನು ನಿರ್ದಿಷ್ಟಪಡಿಸಲಾಗಿದೆ, ಆದರೆ ಗೆಜೆರಿನ ಕಾನಾನ್ಯರನ್ನು ಓಡಿಸದೆ ಅವರು ಬಲವಂತದ ದುಡಿಮೆಯಲ್ಲಿ ಉಳಿಯುತ್ತಾರೆ.
ಎಫ್ರಾಯೀಮ್ಗಡಿಗಳುಸ್ವಾಸ್ತ್ಯಅಪೂರ್ಣ ವಿಧೇಯತೆ
1ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಉಂಟಾದ ಸೊತ್ತಿನ ವಿವರ: ಯೆರಿಕೋವಿನ ಬಳಿಯಲ್ಲಿರುವ ಯೊರ್ದನ್ ನದಿಯಿಂದ ಪೂರ್ವದಲ್ಲಿರುವ ಯೆರಿಕೋವಿನ ಜಲದವರೆಗೂ ಮತ್ತು ಬೇತೇಲಿನ ಬೆಟ್ಟಗಳವರೆಗೂ ಇರುವ ಮರುಭೂಮಿಯ ಮಾರ್ಗವಾಗಿ ಹೋಗಿತ್ತು.
2ಬೇತೇಲಿನಿಂದ ಅಂದರೆ ಲೂಜ್ ಅಲ್ಲಿಂದ ಅರ್ಕಿಯ ಮೇರೆಗಳಾದ ಅಟಾರೋತನ್ನು ದಾಟಿ,
3ಪಶ್ಚಿಮಕ್ಕೆ ಯಫ್ಲೇಟ್ಯರ ಮೇರೆಗೂ ಕೆಳಗಡೆಯಾದ ಬೇತ್ ಹೋರೋನ್ ಮೇರೆಯವರೆಗೂ ಅಲ್ಲಿಂದ ಗೆಜೆರಿನವರೆಗೂ ಹೋಗಿ ಮೆಡಿಟೆರಿಯನ್ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.
4ಹೀಗೆ ಇದನ್ನು ಯೋಸೇಫನ ಮಕ್ಕಳಾದ ಮನಸ್ಸೆ ಎಫ್ರಾಯೀಮರು ತಮಗೆ ಸೊತ್ತಾಗಿ ತೆಗೆದುಕೊಂಡರು.
5ಅವರ ಕುಟುಂಬಗಳ ಪ್ರಕಾರ ಎಫ್ರಾಯೀಮ್ ಗೋತ್ರದ ಪ್ರದೇಶ ಹೀಗಿತ್ತು: ಪೂರ್ವದಿಕ್ಕಿನ ಅಟಾರೋತ್ ಅದ್ದಾರಿನಿಂದ ಪ್ರಾರಂಭಿಸಿ, ಮೇಲಿನ ಬೇತ್ ಹೋರೋನಿನವರೆಗೂ ಇತ್ತು.
6ಅಲ್ಲಿಂದ ಮೆಡಿಟೆರಿಯನ್ ಸಮುದ್ರದ ಪಶ್ಚಿಮ ಮೇರೆಗೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಪೂರ್ವಕ್ಕೆ ತಾನತ್ ಶೀಲೋವಿಗೆ ತಿರುಗಿ ಯಾನೋಹಕ್ಕೆ ಪೂರ್ವದ ಕಡೆಗೆ ಹಾದು ಹೋಗಿತ್ತು.
7ಯಾನೋಹದಿಂದ ಅಟಾರೋತ್‌ಗೂ ನಾರಾ ಎಂಬ ಊರುಗಳ ಮೇಲೆ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನ್ ನದಿಗೆ ಮುಗಿಯುವುದು.
8ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಮೆಡಿಟೆರೆನಿಯನ್ ಸಮುದ್ರದವರೆಗೆ ಮುಗಿಯುವುದು. ಇದು ಎಫ್ರಾಯೀಮನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರವೇ ದೊರೆತ ಸೊತ್ತು.
9ಇದಲ್ಲದೆ ಎಫ್ರಾಯೀಮ್ ಹಾಗೂ ಮನಸ್ಸೆ ಗೋತ್ರದವರ ಮಧ್ಯೆ ಕೊಡಲಾದ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಪ್ರತ್ಯೇಕವಾಗಿ ಕೊಡಲಾಗಿತ್ತು.
10ಅವರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ, ಎಫ್ರಾಯೀಮ್ಯರ ಮಧ್ಯದಲ್ಲಿ ಕಾನಾನ್ಯರು ಈವರೆಗೂ ಅವರಲ್ಲಿ ದಾಸತ್ವದಲ್ಲಿದ್ದುಕೊಂಡು ಕೆಲಸಮಾಡುವವರಾಗಿದ್ದಾರೆ.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.