Widows, children, elders, and laborers pray over desolate Zion beside a fallen crown and silent lyre

ಪ್ರಲಾಪಗಳು 5

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ತನ್ನ ಅವಮಾನವನ್ನು ನೆನಪಿಸಿಕೊಳ್ಳುವಂತೆ ಸಮುದಾಯವು ದೇವರನ್ನು ಕೇಳುತ್ತದೆ: ಬಾಧ್ಯತೆಯೂ ಮನೆಗಳೂ ಕಳೆದುಹೋಗಿವೆ, ಕುಟುಂಬಗಳು ದುರ್ಬಲ, ದುಡಿಮೆ ದಬ್ಬಾಳಿಕೆಯದು, ಸಂಗೀತ ನಿಂತಿದೆ. ಶಾಶ್ವತ ದೈವಿಕ ಆಳ್ವಿಕೆಯ ಕೆಳಗೆ ಪಾಪವನ್ನು ಅರಿಕೆ ಮಾಡುತ್ತಾ, ಜನರು ಪುನಃಸ್ಥಾಪಿಸಲ್ಪಡಲು ಮತ್ತು ತಮ್ಮ ದಿನಗಳನ್ನು ನವೀಕರಿಸಲು ಬೇಡುತ್ತಾರೆ.
ಸಮುದಾಯದ ಪ್ರಾರ್ಥನೆನಷ್ಟಅರಿಕೆಪುನಃಸ್ಥಾಪನೆನವೀಕರಣ
1ಯೆಹೋವ ದೇವರೇ, ನಮಗೆ ಏನು ಸಂಭವಿಸಿದೆ ಎಂದು ಜ್ಞಾಪಕಮಾಡಿಕೊಳ್ಳಿರಿ. ಪರಿಗಣಿಸಿ, ನಮ್ಮ ನಿಂದೆಯನ್ನು ನೋಡಿರಿ.
2ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ, ನಮ್ಮ ಮನೆಗಳು ಪರರಿಗೂ ವಶವಾದವು.
3ನಾವು ಅನಾಥರು, ತಂದೆ ಇಲ್ಲದವರು, ನಮ್ಮ ತಾಯಂದಿರು ವಿಧವೆಯರು.
4ನಾವು ನಮ್ಮ ನೀರನ್ನು ಹಣಕೊಟ್ಟು ಕುಡಿಯಬೇಕಾಗಿದೆ. ನಮ್ಮ ಸೌದೆಯು ನಮಗೇ ಮಾರಲಾಗಿದೆ.
5ನಮ್ಮನ್ನು ಹಿಂಬಾಲಿಸುವವರು ನಮ್ಮ ನೆರಳಿನಲ್ಲೇ ಇದ್ದಾರೆ; ನಾವು ದಣಿದಿದ್ದೇವೆ ಮತ್ತು ವಿಶ್ರಾಂತಿಯನ್ನು ಕಾಣುವುದಿಲ್ಲ.
6ಸಾಕಷ್ಟು ರೊಟ್ಟಿಯನ್ನು ಪಡೆಯಲು ನಾವು ಈಜಿಪ್ಟ್ ಮತ್ತು ಅಸ್ಸೀರಿಯಕ್ಕೆ ಅಧೀನರಾಗಿದ್ದೇವೆ.
7ನಮ್ಮ ತಂದೆಗಳು ಪಾಪಮಾಡಿ ಇಲ್ಲವಾದರು. ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
8ಆಳುಗಳು ನಮ್ಮ ಮೇಲೆ ಆಳಿದ್ದಾರೆ. ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವುದಿಲ್ಲ.
9ಅಡವಿಯ ಖಡ್ಗದ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.
10ಭಯಂಕರವಾದ ಕ್ಷಾಮದಿಂದ ನಮ್ಮ ಚರ್ಮ ಒಲೆಯ ಹಾಗೆ ಕಪ್ಪಾಗಿದೆ.
11ಅವರು ಚೀಯೋನಿನಲ್ಲಿ ಸ್ತ್ರೀಯರ ಮೇಲೆ ಮತ್ತು ಯೆಹೂದದ ನಗರಗಳಲ್ಲಿ ಕನ್ಯೆಯರ ದೌರ್ಜನ್ಯ ಮಾಡಲಾಗಿದೆ.
12ರಾಜಕುಮಾರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ. ಹಿರಿಯರಿಗೆ ಗೌರವವಿಲ್ಲ.
13ಅವರು ಯೌವನಸ್ಥರನ್ನು ಅರೆಯುವುದಕ್ಕೆ ತೆಗೆದುಕೊಂಡರು ಮತ್ತು ಹುಡುಗರು ಕಟ್ಟಿಗೆಯ ಕೆಳಗೆ ಬಿದ್ದರು.
14ಪಟ್ಟಣದ ದ್ವಾರದಿಂದ ಹಿರಿಯರು ಹೋಗಿದ್ದಾರೆ. ಯುವಜನರು ತಮ್ಮ ಸಂಗೀತವನ್ನು ನಿಲ್ಲಿಸಿದ್ದಾರೆ.
15ನಮ್ಮ ಹೃದಯಾನಂದವು ತೀರಿತು. ನಮ್ಮ ನರ್ತನವು ಶೋಕವಾಗಿ ಮಾರ್ಪಟ್ಟಿತು.
16ಕಿರೀಟವು ನಮ್ಮ ತಲೆಯ ಮೇಲಿನಿಂದ ಬಿದ್ದುಹೋಯಿತು. ಅಯ್ಯೋ, ನಾವು ಪಾಪಮಾಡಿದ್ದೇವೆ.
17ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ. ಏಕೆಂದರೆ ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
18ಏಕೆಂದರೆ ಚೀಯೋನ್ ಪರ್ವತವು ಹಾಳಾಗಿರುವುದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡುವುವು.
19ಯೆಹೋವ ದೇವರೇ, ನೀವು ಎಂದೆಂದಿಗೂ ಇರುತ್ತೀರಿ. ನಿಮ್ಮ ಸಿಂಹಾಸನವು ತಲತಲಾಂತರಗಳವರೆಗೂ ಇರುವುದು.
20ನೀವು ನಮ್ಮನ್ನು ಯಾವಾಗಲೂ ಮರೆಯುವುದೇಕೆ? ಇಷ್ಟುಕಾಲ ನಮ್ಮನ್ನು ಮರೆತಿರುವುದೇಕೆ?
21ಯೆಹೋವ ದೇವರೇ, ನಾವು ನಿಮ್ಮ ಕಡೆ ಹಿಂದಿರುಗುವಂತೆ, ನಮ್ಮನ್ನು ನಿಮ್ಮ ಕಡೆಗೆ ಪುನಃ ಸ್ಥಾಪಿಸಿಕೊಳ್ಳಿ. ನಮ್ಮ ದಿನಗಳನ್ನು ಹಿಂದಿನಂತೆಯೇ ನವೀಕರಿಸಿರಿ.
22ಯೆಹೋವ ದೇವರೇ, ನೀವು ನಮ್ಮ ಮೇಲೆ ಮಿತಿಮೀರಿ ಸಿಟ್ಟುಗೊಂಡಿರುವಿರೋ? ನಮ್ಮನ್ನು ಸಂಪೂರ್ಣವಾಗಿ ಕೈಬಿಟ್ಟಿರುವಿರೋ?

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.