A faithful traveler rests beneath a fruitful tree while chaff scatters across a barren path

ಕೀರ್ತನೆಗಳು 1

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 1 ದೇವರ ಉಪದೇಶದಲ್ಲಿ ಬೇರೂರಿದವರನ್ನು ಹೊಟ್ಟಿನಂತೆ ಹಾರಿಹೋಗುವವರೊಂದಿಗೆ ಹೋಲಿಸುತ್ತದೆ. ಧ್ಯಾನ, ಜ್ಞಾನಿಗಳ ಸಹವಾಸ ಮತ್ತು ಫಲಭರಿತ ಜೀವನವು ನೀತಿವಂತರ ಮಾರ್ಗವನ್ನು ಗುರುತಿಸುತ್ತವೆ, ಆದರೆ ದುಷ್ಟರ ಮಾರ್ಗವು ನಿಲ್ಲಲಾರದು.
ಜ್ಞಾನಧ್ಯಾನನೀತಿಎರಡು ಮಾರ್ಗಗಳು
1ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಿಗಳ ಮಾರ್ಗದಲ್ಲಿ ನಿಲ್ಲದೆ, ಅಪಹಾಸ್ಯಗಾರರ ಕೂಟದಲ್ಲಿ ಕೂತುಕೊಳ್ಳದೆ,
2ಯೆಹೋವ ದೇವರ ನಿಯಮದಲ್ಲಿ ಆನಂದಿಸುತ್ತಾ, ದೇವರ ನಿಯಮವನ್ನು ರಾತ್ರಿ ಹಗಲು ಧ್ಯಾನಿಸುತ್ತಾ ಬದುಕುವವರು ಧನ್ಯರು.
3ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ . ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು.
4ಆದರೆ ದುಷ್ಟರು ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೇ ಇದ್ದಾರೆ.
5ಆದ್ದರಿಂದ ದುಷ್ಟರು ನ್ಯಾಯತೀರ್ಪಿಗೆ ಒಳಗಾಗುವರು, ಪಾಪಿಗಳಿಗೆ ನೀತಿವಂತರ ಸಭೆಯಲ್ಲಿ ಸ್ಥಳವಿರುವುದಿಲ್ಲ.
6ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.