
ಕೀರ್ತನೆಗಳು 100
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 100 ಇಡೀ ಭೂಮಿಯನ್ನು ಆನಂದದ ಸೇವೆ, ಸಂತೋಷದ ಹಾಡು ಮತ್ತು ಕೃತಜ್ಞತೆಯ ಪವಿತ್ರ ಅಂಗಳಗಳಿಗೆ ಆಹ್ವಾನಿಸುತ್ತದೆ. ಒಳ್ಳೆಯತನ, ಸ್ಥಿರ ಪ್ರೀತಿ ಮತ್ತು ನಂಬಿಗಸ್ತಿಕೆಯು ಪ್ರತಿ ತಲೆಮಾರಿನ ಮೂಲಕ ಬಾಳುವ ಸೃಷ್ಟಿಕರ್ತನೂ ಕುರುಬನೂ ಆದವನಿಗೆ ಸೇರಿರುವುದರ ಮೇಲೆ ಆರಾಧನೆಯು ನೆಲೆಸಿದೆ.
ಕೃತಜ್ಞತೆಸಂತೋಷಸೇರುವಿಕೆನಂಬಿಗಸ್ತಿಕೆ
1ಸಮಸ್ತ ಭೂಮಿಯೇ, ಯೆಹೋವ ದೇವರಿಗೆ ಜಯಧ್ವನಿ ಮಾಡಿರಿ.
2ಸಂತೋಷದಿಂದ ಯೆಹೋವ ದೇವರನ್ನು ಆರಾಧಿಸಿರಿ; ಆನಂದದಿಂದ ಹಾಡುತ್ತಾ ಅವರ ಮುಂದೆ ಬನ್ನಿರಿ.
3ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; ಅವರೇ ನಮ್ಮನ್ನು ಉಂಟುಮಾಡಿದ್ದಾರೆ; ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ.
4ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ, ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ; ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ.
5ಯೆಹೋವ ದೇವರು ಒಳ್ಳೆಯವರು, ಅವರ ಕರುಣೆಯು ಯುಗಯುಗಕ್ಕೂ ಇರುವುದು. ಅವರ ಸತ್ಯತೆಯು ತಲತಲಾಂತರಕ್ಕೂ ಮುಂದುವರಿಯುವುದು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.