
ಕೀರ್ತನೆಗಳು 101
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 101 ಮನೆಯಲ್ಲಿಯೂ ಸಾರ್ವಜನಿಕವಾಗಿಯೂ ಯಥಾರ್ಥತೆಯನ್ನು ಅಭ್ಯಾಸ ಮಾಡಲು ದೃಢನಿರ್ಧಾರ ಮಾಡಿದ ಆಡಳಿತಗಾರನನ್ನು ಪ್ರಸ್ತುತಪಡಿಸುತ್ತದೆ. ಮೋಸ, ನಿಂದೆ, ಅಹಂಕಾರ ಮತ್ತು ಭ್ರಷ್ಟತೆಗೆ ಸ್ವಾಗತವಿಲ್ಲ, ಆದರೆ ನಂಬಿಗಸ್ತ ಜನರು ವಿಶ್ವಾಸಾರ್ಹ ಸೇವೆಯ ಸ್ಥಾನವನ್ನು ಪಡೆಯುತ್ತಾರೆ.
ಯಥಾರ್ಥತೆನಾಯಕತ್ವನ್ಯಾಯನಂಬಿಗಸ್ತಿಕೆ
1ನಿಮ್ಮ ಪ್ರೀತಿ ನೀತಿಗಳನ್ನು ಕುರಿತು ಹಾಡುವೆನು; ಯೆಹೋವ ದೇವರೇ, ನಿಮ್ಮನ್ನು ಸ್ತುತಿಸುವೆನು.
2ದೋಷರಹಿತ ಮಾರ್ಗದಲ್ಲಿ ನಡೆಯಲು ಜಾಗರೂಕನಾಗಿರುವೆನು; ನೀವು ಯಾವಾಗ ನನ್ನ ಬಳಿಗೆ ಬರುವಿರಿ? ನಾನು ನಿರ್ದೋಷ ಹೃದಯದಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.
3ನಾನು ಕೆಟ್ಟ ಕಾರ್ಯವನ್ನು ನನ್ನ ಕಣ್ಣುಗಳ ಮುಂದೆ ಒಪ್ಪಿಗೆಯಿಂದ ನೋಡುವುದಿಲ್ಲ. ಅವಿಶ್ವಾಸಿಗಳು ಮಾಡುವುದನ್ನು ದ್ವೇಷಿಸುವೆನು; ಅದರಲ್ಲಿ ನಾನು ಭಾಗವಹಿಸುವುದಿಲ್ಲ.
4ಮೂರ್ಖಜನರು ನನ್ನಿಂದ ದೂರವಿರುವರು; ದುಷ್ಟತನವನ್ನು ಅರಿಯದಿರುವೆನು.
5ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸುಮ್ಮನಿರಿಸುವೆನು; ಗರ್ವದ ಕಣ್ಣೂ, ಅಹಂಕಾರದ ಹೃದಯವೂ ಉಳ್ಳವನನ್ನು ಸಹಿಸಲಾರೆನು.
6ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು; ನಿಷ್ಕಳಂಕವಾಗಿ ನಡೆಯುವವರೇ ನನ್ನ ಸೇವೆಯಲ್ಲಿರಬೇಕು.
7ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನಿಂತುಕೊಳ್ಳನು.
8ದುಷ್ಟತನ ಮಾಡುವವರೆಲ್ಲರನ್ನು ಪ್ರತಿ ಮುಂಜಾನೆ ನಿಲ್ಲಿಸಿಬಿಡುವೆನು; ಯೆಹೋವ ದೇವರ ಪಟ್ಟಣದೊಳಗಿಂದ ಪ್ರತಿಯೊಬ್ಬ ದುಷ್ಟನನ್ನು ಹೊರಗೆ ಹಾಕುವೆನು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.