A faithful community stands in light above concealed archers and a troubled city

ಕೀರ್ತನೆಗಳು 11

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಸಾಮಾಜಿಕ ಅಸ್ತಿವಾರಗಳು ನಾಶವಾದಂತೆ ತೋರುವಾಗ ಕೀರ್ತನೆ 11 ಗಾಬರಿಯನ್ನು ತಿರಸ್ಕರಿಸುತ್ತದೆ. ಮಾನವ ನಡತೆಯನ್ನು ಪರೀಕ್ಷಿಸಲಾಗುತ್ತದೆ ಮತ್ತು ಯಥಾರ್ಥ ನ್ಯಾಯವು ಕೊನೆಗೆ ಹಿಂಸೆಯನ್ನೂ ಮೋಸವನ್ನೂ ಎದುರಿಸಿ ನಿಲ್ಲುತ್ತದೆ ಎಂದು ನಂಬಿ ಕೀರ್ತನೆಗಾರನು ಆಶ್ರಯದಲ್ಲಿ ಉಳಿಯುತ್ತಾನೆ.
ಆಶ್ರಯಧೈರ್ಯನ್ಯಾಯಪರೀಕ್ಷೆ
1ಯೆಹೋವ ದೇವರಲ್ಲಿ ನಾನು ಆಶ್ರಯಿಸಿದ್ದೇನೆ. ಹಾಗಾದರೆ, “ಒಂದು ಪಕ್ಷಿಯಂತೆ ನಿನ್ನ ಪರ್ವತಕ್ಕೆ ಹಾರಿ ಹೋಗು,” ಎಂದು ನೀವು ನನಗೆ ಹೇಗೆ ಹೇಳುವಿರಿ?
2“ಇಗೋ, ದುಷ್ಟರು ತಮ್ಮ ಬಿಲ್ಲು ಬಗ್ಗಿಸಿ; ಬಾಣವನ್ನು ಬಿಲ್ಲಿಗೆ ಹೂಡಿ, ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವುದಕ್ಕೆ ಸಿದ್ಧಮಾಡಿದ್ದಾರೆ.
3ಅಸ್ತಿವಾರಗಳೇ ಕೆಡವುತ್ತಿರಲು, ನೀತಿವಂತನು ಏನು ಮಾಡಲು ಸಾಧ್ಯ?”
4ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ; ಯೆಹೋವ ದೇವರು ತಮ್ಮ ಪರಲೋಕ ಸಿಂಹಾಸನದಲ್ಲಿ ಇದ್ದಾರೆ. ಅವರು ಭೂಮಿಯಲ್ಲಿ ಪ್ರತಿಯೊಬ್ಬರನ್ನು ಗಮನಿಸುತ್ತಾರೆ; ಅವರ ಕಣ್ಣುಗಳು ಮಾನವರೆಲ್ಲರನ್ನು ಪರಿಶೋಧಿಸುತ್ತವೆ.
5ಯೆಹೋವ ದೇವರು ನೀತಿವಂತನನ್ನು ಪರೀಕ್ಷಿಸುತ್ತಾರೆ, ಆದರೆ ಅವರು ದುಷ್ಟರನ್ನೂ ಹಿಂಸಾತ್ಮಕರನ್ನೂ ವಿರೋಧಿಸುತ್ತಾರೆ.
6ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.
7ಏಕೆಂದರೆ ಯೆಹೋವ ದೇವರು ನೀತಿಯುಳ್ಳವರು. ಅವರು ನ್ಯಾಯವನ್ನು ಪ್ರೀತಿಸುತ್ತಾರೆ; ಯಥಾರ್ಥರು ಅವರ ಮುಖವನ್ನು ದೃಷ್ಟಿಸುವರು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.