
ಕೀರ್ತನೆಗಳು 112
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 112 ಭಯಭಕ್ತಿ, ಉದಾರತೆ, ನ್ಯಾಯ ಮತ್ತು ಭರವಸೆಯಿಂದ ರೂಪುಗೊಂಡ ಜನರನ್ನು ವರ್ಣಿಸುತ್ತದೆ. ಅವರ ಪ್ರಭಾವವು ಕತ್ತಲೆಯಲ್ಲಿ ಬೆಳಕಾಗುತ್ತದೆ; ಕರುಣೆ ಮತ್ತು ದೃಢ ನಿರೀಕ್ಷೆಯಲ್ಲಿ ಭದ್ರವಾದ ಸ್ಥಿರ ಹೃದಯವನ್ನು ಕೆಟ್ಟ ಸುದ್ದಿಯೂ ಕಿತ್ತುಹಾಕಲಾರದು.
ಉದಾರತೆಭರವಸೆನ್ಯಾಯಸ್ಥಿರತೆ
1ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಭಯಪಟ್ಟು ಅವರ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವವರು ಧನ್ಯರು.
2ಅವರ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿಯಾಗಿರುವುದು; ಯಥಾರ್ಥರ ಸಂತತಿಯು ಆಶೀರ್ವಾದ ಹೊಂದುವುದು.
3ಧನವೂ, ಐಶ್ವರ್ಯವೂ ಅವರ ಮನೆಯಲ್ಲಿ ಇರುವುದು; ಅವರ ನೀತಿಯು ಶಾಶ್ವತವಾಗಿ ಉಳಿಯುವುದು.
4ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಮೂಡುವುದು; ಅವರು ಕೃಪೆಯೂ, ಅನುಕಂಪವೂ, ನೀತಿಯೂ ಉಳ್ಳವವರಾಗಿರುವರು.
5ದಯೆತೋರಿಸಿ ಸಾಲಕೊಡುವವರಿಗೆ, ಒಳ್ಳೆಯದಾಗುವುದು; ಅವರು ತಮ್ಮ ಕಾರ್ಯಗಳನ್ನು ನ್ಯಾಯದಿಂದ ನಡೆಸುವರು.
6ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು; ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು.
7ಅವರಿಗೆ ಅಶುಭದ ಸುದ್ದಿಯ ಭಯ ಇರುವುದಿಲ್ಲ; ಅವರ ಹೃದಯವು ಯೆಹೋವ ದೇವರಲ್ಲಿ ಭರವಸವಿಟ್ಟು ಸ್ಥಿರವಾಗಿರುವುದು.
8ಅವರ ಹೃದಯವು ಸುರಕ್ಷಿತವಾಗಿರುವುದು. ಅವರು ತಮ್ಮ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವರು, ಭಯಪಡರು.
9ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.
10ದುಷ್ಟರು ಇದನ್ನು ಕಂಡು ವ್ಯಥೆ ಪಡುವರು; ಅವರು ತಮ್ಮ ಹಲ್ಲು ಕಡಿದು ಮರೆಯಾಗಿ ಹೋಗುವರು; ದುಷ್ಟರ ಆಶೆಯು ನಾಶವಾಗುವುದು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.