A new mother embraces her baby while neighbors honor poor families at a sunrise celebration

ಕೀರ್ತನೆಗಳು 113

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 113 ಸೂರ್ಯೋದಯದಿಂದ ಸೂರ್ಯಾಸ್ತದವರೆಗೂ ಆಕಾಶದ ಎತ್ತರದಿಂದ ಸಮಾಜದ ಕೆಳಗಿನ ಸ್ಥಳಗಳವರೆಗೂ ಸ್ತುತಿಯನ್ನು ವಿಸ್ತರಿಸುತ್ತದೆ. ಬಡವರು ಘನತೆಯನ್ನು ಪಡೆಯುತ್ತಾರೆ, ದೀನರು ಗೌರವಾನ್ವಿತರ ಸಹವಾಸವನ್ನು ಹಂಚಿಕೊಳ್ಳುತ್ತಾರೆ, ಮತ್ತು ಮಕ್ಕಳಿಲ್ಲದ ಸ್ತ್ರೀಯು ಕುಟುಂಬದೊಳಗೆ ಸಂತೋಷಪಡುತ್ತಾಳೆ.
ಸ್ತುತಿಘನತೆಬಡವರುಕುಟುಂಬ
1ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರ ಸೇವಕರೇ, ಯೆಹೋವ ದೇವರ ಹೆಸರನ್ನು ಸ್ತುತಿಸಿರಿ.
2ಇಂದಿನಿಂದ ಯುಗಯುಗಕ್ಕೂ ಯೆಹೋವ ದೇವರ ಹೆಸರಿಗೆ ಸ್ತುತಿಯುಂಟಾಗಲಿ.
3ಸೂರ್ಯೋದಯದಿಂದ ಅದರ ಅಸ್ತಮಾನದವರೆಗೂ ಯೆಹೋವ ದೇವರ ಹೆಸರು ಸ್ತುತಿಹೊಂದತಕ್ಕದ್ದು.
4ಯೆಹೋವ ದೇವರು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವರು; ಅವರ ಮಹಿಮೆಯು ಆಕಾಶಗಳ ಮೇಲೆ ಮೆರೆಯುತ್ತದೆ.
5ನಮ್ಮ ದೇವರಾದ ಯೆಹೋವ ದೇವರ ಹಾಗೆ ಯಾರು ಇದ್ದಾರೆ? ಉನ್ನತಲೋಕದಲ್ಲಿ ಅವರು ವಾಸಿಸುತ್ತಾರೆ.
6ಆಕಾಶವನ್ನೂ, ಭೂಮಿಯನ್ನೂ ತಗ್ಗಿಸಿಕೊಂಡು ನೋಡುತ್ತಾರೆ.
7ಧೂಳಿನೊಳಗಿಂದ ದರಿದ್ರರನ್ನು ಎಬ್ಬಿಸುತ್ತಾರೆ, ತಿಪ್ಪೆಯೊಳಗಿಂದ ಬಡವರನ್ನು ಎತ್ತುತ್ತಾರೆ.
8ದೇವರು ಅವರನ್ನು ಅಧಿಪತಿಗಳ ಸಂಗಡ ಇರುವಂತೆ ಮಾಡುತ್ತಾರೆ. ತಮ್ಮ ಜನರ ಅಧಿಪತಿಗಳ ಸಂಗಡ ಕೂರಿಸುತ್ತಾರೆ.
9ಬಂಜೆಯಾದವಳನ್ನು ಮಕ್ಕಳ ಸೌಭಾಗ್ಯದಲ್ಲಿ ಸಂತೋಷಿಸಿ, ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾರೆ. ಯೆಹೋವ ದೇವರನ್ನು ಸ್ತುತಿಸಿರಿ.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.