
ಕೀರ್ತನೆಗಳು 114
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 114 ವಿಮೋಚನೆ ಮತ್ತು ನಾಡಿನ ಪ್ರವೇಶವನ್ನು ಸೃಷ್ಟಿಯ ಸ್ಪಷ್ಟ ಪ್ರತಿಕ್ರಿಯೆಯಾಗಿ ಸಂಕ್ಷೇಪಿಸುತ್ತದೆ. ಗುಲಾಮರಾದ ಜನರನ್ನು ಪವಿತ್ರಸ್ಥಳವಾಗಿ ಪರಿವರ್ತಿಸುವ ಸಾನ್ನಿಧ್ಯದ ಮುಂದೆ ಸಮುದ್ರವೂ ಯೊರ್ದನೂ ಹಿಂದೆ ಸರಿಯುತ್ತವೆ, ಪರ್ವತಗಳು ಜಿಗಿಯುತ್ತವೆ, ಮತ್ತು ಬಂಡೆ ನೀರಾಗುತ್ತದೆ.
ವಿಮೋಚನೆಸೃಷ್ಟಿಬಿಡುಗಡೆಸಾನ್ನಿಧ್ಯ
1ಇಸ್ರಾಯೇಲರು ಈಜಿಪ್ಟಿನೊಳಗಿಂದಲೂ, ಯಾಕೋಬನ ಮನೆತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟುಬಂದಾಗ,
2ಯೆಹೂದವು ದೇವರ ಪರಿಶುದ್ಧ ಸ್ಥಳವಾಯಿತು, ಇಸ್ರಾಯೇಲು ದೇವರ ರಾಜ್ಯವಾಯಿತು.
3ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ನದಿ ಹಿಂದಿರುಗಿತು.
4ಬೆಟ್ಟಗಳು ಟಗರುಗಳಂತೆ ಓಡಿತು, ಗುಡ್ಡಗಳು ಕುರಿಮರಿಗಳಂತೆಯೂ ಓಡಾಡಿದವು.
5ಸಮುದ್ರವೇ, ನಿನಗೆ ಏನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನ್ ನದಿಯೇ, ಏಕೆ ಹಿಂದಿರುಗುತ್ತೀ?
6ಬೆಟ್ಟಗಳೇ, ಟಗರುಗಳ ಹಾಗೆಯೂ; ಚಿಕ್ಕಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವುದೇಕೆ?
7ಯೆಹೋವ ದೇವರ ಸನ್ನಿಧಿಯಲ್ಲಿಯೂ, ಯಾಕೋಬಿನ ದೇವರ ಮುಂದೆಯೂ ಭೂಮಿಯೇ ನಡುಗು.
8ದೇವರು ಬಂಡೆಯನ್ನು ನೀರಿನ ಕೆರೆಯಾಗಿಯೂ, ಕಗ್ಗಲ್ಲನ್ನು ನೀರಿನ ಬುಗ್ಗೆಯಾಗಿ ಮಾರ್ಪಡಿಸುತ್ತಾರೆ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.