Joyful travelers enter Jerusalem as elders judge fairly at the gate and families greet one another

ಕೀರ್ತನೆಗಳು 122

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 122 ಕುಲಗಳು ಆರಾಧಿಸುವ ಮತ್ತು ನ್ಯಾಯವನ್ನು ನಿರ್ವಹಿಸುವ ಸಂಕುಚಿತ ಪಟ್ಟಣವಾದ ಯೆರೂಸಲೇಮಿಗೆ ಆಗಮನವನ್ನು ಕೊಂಡಾಡುತ್ತದೆ. ಸಮುದಾಯದ ಮೇಲಿನ ಪ್ರೀತಿಯು ಶಾಂತಿ, ಭದ್ರತೆ, ಸಮೃದ್ಧ ಮನೆತನಗಳು ಮತ್ತು ಪವಿತ್ರಸ್ಥಳದ ಒಳಿತಿಗಾಗಿ ಪ್ರಾರ್ಥನೆಯಾಗುತ್ತದೆ.
ಯೆರೂಸಲೇಮ್ಶಾಂತಿಆರಾಧನೆನ್ಯಾಯ
1“ಯೆಹೋವ ದೇವರ ಆಲಯಕ್ಕೆ ಹೋಗೋಣ,” ಎಂದು ಜನರು ನನ್ನನ್ನು ಕರೆದಾಗ, ನನಗೆ ಸಂತೋಷವಾಯಿತು.
2ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಿಲುಗಳಲ್ಲಿ ತಲುಪಿದೆ.
3ಯೆರೂಸಲೇಮು, ಗಂಭೀರವಾಗಿಯೂ ಗಟ್ಟಿಯಾಗಿಯೂ ಕಟ್ಟಿರುವ ಪಟ್ಟಣವಾಗಿದೆ.
4ಅಲ್ಲಿಗೆ ಗೋತ್ರಗಳು, ಯೆಹೋವ ದೇವರು ಇಸ್ರಾಯೇಲಿಗೆ ಕೊಟ್ಟ ಕಟ್ಟಳೆಗಳ ಪ್ರಕಾರ ಯೆಹೋವ ದೇವರ ಹೆಸರನ್ನು ಕೊಂಡಾಡುವುದಕ್ಕೆ ಗೋತ್ರಗಳು ಯಾತ್ರೆಯಾಗಿ ಬರುತ್ತಿದ್ದವು.
5ಏಕೆಂದರೆ ಅಲ್ಲಿ ನ್ಯಾಯ ನಿರ್ಣಯಕ್ಕೆ ಸಿಂಹಾಸನಗಳೂ, ಅಂದರೆ, ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.
6ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥನೆಮಾಡಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಅಭಿವೃದ್ಧಿಯಾಗಲಿ.
7ನಿನ್ನ ಪ್ರಾಕಾರದಲ್ಲಿ ಸಮಾಧಾನವಿರಲಿ, ನಿನ್ನ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.”
8ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ “ನಿನ್ನಲ್ಲಿ ಸಮಾಧಾನವಿರಲಿ,” ಎಂದು ಈಗ ಹೇಳುತ್ತೇನೆ.
9ನಮ್ಮ ದೇವರಾದ ಯೆಹೋವ ದೇವರ ಆಲಯದ ನಿಮಿತ್ತ ನಿನಗೆ ಸಮೃದ್ಧಿಯಾಗಲಿ ಎಂದು ಹಾರೈಸುತ್ತೇನೆ.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.