
ಕೀರ್ತನೆಗಳು 124
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 124 ದೈವಿಕ ಸಹಾಯವಿಲ್ಲದಿದ್ದರೆ ಏನಾಗುತ್ತಿತ್ತು ಎಂದು ಕಲ್ಪಿಸುತ್ತದೆ: ವೈರಿಗಳು, ಕೋಪ, ಪ್ರವಾಹ ಮತ್ತು ಹಲ್ಲುಗಳು ಜನರನ್ನು ನುಂಗಿಬಿಡುತ್ತಿದ್ದವು. ಬದಲಾಗಿ, ಬೇಟೆಯು ಮುರಿದ ಬಲೆಯಿಂದ ತಪ್ಪಿಸಿಕೊಂಡು ತನ್ನ ರಕ್ಷಕನನ್ನು ಕೃತಜ್ಞತೆಯಿಂದ ಹೆಸರಿಸುತ್ತದೆ.
ತಪ್ಪಿಸಿಕೊಳ್ಳುವಿಕೆಸಹಾಯಅಪಾಯಕೃತಜ್ಞತೆ
1ಯೆಹೋವ ದೇವರು ನಮ್ಮ ಪರವಾಗಿ ಇರದಿದ್ದರೆ, ಏನಾಗುತ್ತಿತ್ತು ಎಂದು ಇಸ್ರಾಯೇಲರೇ ಹೇಳಲಿ.
2ವೈರಿಗಳು ನಮಗೆ ವಿರೋಧವಾಗಿ ಎದ್ದಾಗ ಯೆಹೋವ ದೇವರು ನಮ್ಮ ಪರವಾಗಿ ಇರದಿದ್ದರೆ,
3ಅವರು ನಮ್ಮ ಮೇಲೆ ರೋಷಗೊಂಡು ನಮ್ಮನ್ನು ನಾಶಮಾಡಿಬಿಡುತ್ತಿದ್ದರು.
4ಆಗ ಪ್ರವಾಹವು ನಮ್ಮನ್ನು ಮುಳುಗಿಸುತ್ತಿತ್ತು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು.
5ರಭಸ ಪ್ರವಾಹ ನಮ್ಮನ್ನು ಕೊಚ್ಚಿಕೊಂಡು ಹೋಗಿಬಿಡುತ್ತಿತ್ತು.
6ಆದರೆ ನಮ್ಮನ್ನು ವೈರಿಗಳ ಹಲ್ಲುಗಳಿಗೆ ಬೇಟೆಯಾಗಿ ಕೊಡದೆ ಇದ್ದ ಯೆಹೋವ ದೇವರಿಗೆ ಸ್ತೋತ್ರವಾಗಲಿ.
7ನಾವು ಬೇಟೆಗಾರರ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತೆ ಇದ್ದೇವೆ. ನಾವು ಹರಿದುಹೋದ ಬಲೆಯಿಂದ ತಪ್ಪಿಸಿಕೊಂಡೆವು.
8ನಮ್ಮ ಸಹಾಯವು ಆಕಾಶವನ್ನೂ, ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರ ಹೆಸರಿನಲ್ಲಿ ಒದಗಿ ಬಂತು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.