
ಕೀರ್ತನೆಗಳು 126
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 126 ಕನಸಿನಂತೆ ಅನಿಸಿದಷ್ಟು ಆಶ್ಚರ್ಯಕರ ಪುನಃಸ್ಥಾಪನೆಯನ್ನು ನೆನಪಿಸಿಕೊಳ್ಳುತ್ತದೆ. ನಗುವೂ ಜನಾಂಗಗಳ ಸಾಕ್ಷಿಯೂ ಮರಳುವಿಕೆಗೆ ಜೊತೆಯಾಗುತ್ತವೆ, ಮತ್ತು ನವೀಕೃತ ಪ್ರಾರ್ಥನೆಯು ಪ್ರಸ್ತುತ ಕಣ್ಣೀರೂ ಕಷ್ಟದ ಬಿತ್ತನೆಯೂ ಹಾಡುಗಳೂ ಸಮೃದ್ಧ ಸುಗ್ಗಿಯೂ ಆಗುವುದೆಂದು ನಂಬುತ್ತದೆ.
ಪುನಃಸ್ಥಾಪನೆಸಂತೋಷಕಣ್ಣೀರುಸುಗ್ಗಿ
1ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡವರ ಹಾಗಿದ್ದೆವು.
2ಆಗ ನಮ್ಮ ಬಾಯಿ ನಗೆಯಿಂದಲೂ, ನಮ್ಮ ಬಾಯಿ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಜನಾಂಗಗಳು, “ಯೆಹೋವ ದೇವರು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ,” ಎಂದು ಹೇಳಿದರು.
3ಯೆಹೋವ ದೇವರು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ; ಆದಕಾರಣ ಸಂತೋಷಿಸುತ್ತಾ ಇದ್ದೇವೆ.
4ಯೆಹೋವ ದೇವರೇ, ನೆಗೆವನಲ್ಲಿರುವ ಹೊಳೆಗಳ ಹಾಗೆ ಉಳಿದಿರುವವರನ್ನು ಸಹ ಸೆರೆಯಿಂದ ತಿರುಗಿ ಬರಮಾಡಿರಿ.
5ಕಣ್ಣೀರಿನಿಂದ ಬಿತ್ತುವವರು, ಆನಂದ ಗೀತದೊಡನೆ ಕೊಯ್ಯುವರು;
6ಬಿತ್ತಲು ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವರು, ತಮ್ಮ ಸಿವುಡುಗಳನ್ನು ಹೊತ್ತುಕೊಂಡು ಆನಂದ ಗೀತದೊಡನೆ ತಿರುಗಿ ಬರುವರು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.