
ಕೀರ್ತನೆಗಳು 130
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 130 ಆಳವಾದ ಅಪರಾಧಪ್ರಜ್ಞೆ ಮತ್ತು ಅಗತ್ಯದಿಂದ ಮೊರೆಯಿಡುತ್ತದೆ, ಆದರೂ ಕ್ಷಮೆಯು ಹತಾಶೆಯ ಬದಲು ಭಯಭಕ್ತಿಯನ್ನು ಉಂಟುಮಾಡುತ್ತದೆ. ಕಾಯುವ ಆತ್ಮವು ಕಾವಲುಗಾರರು ಬೆಳಗನ್ನು ಕಾಯುವುದಕ್ಕಿಂತ ಹೆಚ್ಚು ಆತುರದಿಂದ ನೋಡುತ್ತಾ, ಸ್ಥಿರ ಪ್ರೀತಿಯಲ್ಲಿಯೂ ಸಮುದಾಯದ ಸಮೃದ್ಧ ವಿಮೋಚನೆಯಲ್ಲಿಯೂ ಭರವಸೆಯಿಡುತ್ತದೆ.
ಕ್ಷಮೆಕಾಯುವಿಕೆನಿರೀಕ್ಷೆವಿಮೋಚನೆ
1ಯೆಹೋವ ದೇವರೇ, ಅಂತರಾಳದಿಂದ ನಿಮಗೆ ಮೊರೆಯಿಡುತ್ತೇನೆ.
2ಯೆಹೋವ ದೇವರೇ, ನನ್ನ ಧ್ವನಿಯನ್ನು ಕೇಳಿರಿ. ನನ್ನ ಕೂಗಿಗೆ ಕರುಣೆ ತೋರಿಸಿ, ನಿಮ್ಮ ಕಿವಿಗಳು ನನ್ನ ವಿಜ್ಞಾಪನೆಗಳನ್ನು ಆಲೈಸಲಿ.
3ಯೆಹೋವ ದೇವರೇ, ನೀವು ಪಾಪಗಳನ್ನು ಎಣಿಸಿದರೆ, ನಿಮ್ಮ ಮುಂದೆ ಯಾರು ನಿಲ್ಲುವರು?
4ಆದರೆ ನಿಮ್ಮಲ್ಲಿ ಕ್ಷಮಾಪಣೆ ಉಂಟು. ನಾವು ನಿಮ್ಮನ್ನು ಭಯಭಕ್ತಿಯಿಂದ ಸೇವೆಮಾಡುವಂತೆ ನಿಮ್ಮ ಕ್ಷಮಾಪಣೆಯಿದೆ.
5ಯೆಹೋವ ದೇವರನ್ನು ನಿರೀಕ್ಷಿಸುತ್ತೇನೆ, ನನ್ನ ಅಂತರಾಳವು ಸಹ ನಿರೀಕ್ಷಿಸುತ್ತದೆ; ನಾನು ದೇವರ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
6ಉದಯಕ್ಕಾಗಿ ಕಾವಲುಗಾರ ಕಾದಿರುತ್ತಾರೆ. ನಾನು ಆ ಕಾವಲುಗಾರರು ಕಾದಿರುವುದಕ್ಕಿಂತ ಹೆಚ್ಚಾಗಿಯೇ ಯೆಹೋವ ದೇವರಿಗಾಗಿ ನಿರೀಕ್ಷಿಸುತ್ತಿದ್ದೇನೆ.
7ಇಸ್ರಾಯೇಲು ಯೆಹೋವ ದೇವರಲ್ಲಿ ನಿರೀಕ್ಷಿಸಲಿ, ಏಕೆಂದರೆ ಯೆಹೋವ ದೇವರ ಬಳಿಯಲ್ಲಿ ಒಂಡಬಡಿಕೆಯ ಪ್ರೀತಿ ಇರುತ್ತದೆ, ಸಂಪೂರ್ಣ ವಿಮೋಚನೆಯೂ ಇರುತ್ತದೆ.
8ದೇವರು ಇಸ್ರಾಯೇಲನ್ನು ಅವರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವರು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.