Wealthy diners feast above poor neighbors who share food and shelter

ಕೀರ್ತನೆಗಳು 14

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 14 ನಡತೆಯ ಮೂಲಕ ಹೊಣೆಗಾರಿಕೆಯನ್ನು ನಿರಾಕರಿಸುವ ಕಾರಣ ಪ್ರಾಯೋಗಿಕ ಭ್ರಷ್ಟತೆಯನ್ನು ಮೂರ್ಖತನವೆಂದು ಕರೆಯುತ್ತದೆ. ವ್ಯಾಪಕ ಅನ್ಯಾಯವು ಬಡವರಿಗೆ ಹಾನಿ ಮಾಡುತ್ತದೆ, ಆದರೂ ದೇವರು ನೀತಿವಂತರೊಂದಿಗೆ ಇದ್ದಾನೆ ಮತ್ತು ಅವರ ಆಶ್ರಯವೂ ವಾಗ್ದಾನ ಮಾಡಿದ ವಿಮೋಚಕನೂ ಆಗಿ ಉಳಿಯುತ್ತಾನೆ.
ಮೂರ್ಖತನಭ್ರಷ್ಟತೆಬಡವರುಆಶ್ರಯ
1“ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋಗಿ, ಅಸಹ್ಯ ಕೃತ್ಯಗಳನ್ನು ಮಾಡುತ್ತಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ.
2ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ಯೆಹೋವ ದೇವರು ಸ್ವರ್ಗದಿಂದ, ಮನುಷ್ಯರ ಮೇಲೆ ದೃಷ್ಟಿಸಿದರು.
3ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ, ಒಬ್ಬರಾದರೂ ಇಲ್ಲ.
4ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಆದರೆ ಅವರು ಯೆಹೋವ ದೇವರಿಗೆ ಎಂದೂ ಮೊರೆಯಿಡುವುದಿಲ್ಲ.
5ದೇವರು ನೀತಿವಂತರ ಸಹವಾಸದಲ್ಲಿ ಇರುವುದರಿಂದ, ದುಷ್ಟತ್ವವನ್ನು ನಡೆಸುವವರು ಅತ್ಯಂತ ಭಯಭ್ರಾಂತರಾಗುವರು.
6ದುಷ್ಟತ್ವ ನಡೆಸುವವರೇ, ನೀವು ಬಡವರ ಯೋಜನೆಗಳನ್ನು ನಿರಾಶೆಗೊಳಿಸುತ್ತೀರಿ, ಆದರೆ ಯೆಹೋವ ದೇವರೇ ಅವರ ಆಶ್ರಯವಾಗಿದ್ದಾರೆ.
7ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ಯೆಹೋವ ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ, ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.