
ಕೀರ್ತನೆಗಳು 141
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 141 ಪ್ರಾರ್ಥನೆಯನ್ನು ಶಿಸ್ತಿನ ಚಾರಿತ್ರ್ಯದೊಂದಿಗೆ ಸೇರಿಸುತ್ತದೆ. ಏರುವ ಧೂಪವು ಆರಾಧನೆಯನ್ನು ಸಂಕೇತಿಸುತ್ತದೆ, ಮತ್ತು ಕಾಪಾಡಿದ ಮಾತು, ಎದುರಿಸಿದ ಆಸೆ, ಸ್ವಾಗತಿಸಿದ ತಿದ್ದುಪಡಿ ಮತ್ತು ಅಡಗಿದ ಬಲೆಗಳಿಂದ ತಪ್ಪಿಸಿಕೊಳ್ಳುವಿಕೆಯು ಒತ್ತಡದ ಕೆಳಗೆ ನಂಬಿಗಸ್ತರಾಗಿ ಉಳಿಯುವ ಬಯಕೆಯನ್ನು ವ್ಯಕ್ತಪಡಿಸುತ್ತವೆ.
ಪ್ರಾರ್ಥನೆಮಾತುಶಿಸ್ತುತಿದ್ದುಪಡಿ
1ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ, ನನ್ನ ಬಳಿಗೆ ಬರಲು ತ್ವರೆಪಡಿರಿ. ನಾನು ನಿಮ್ಮನ್ನು ಕರೆಯುವಾಗ, ನನಗೆ ಕಿವಿಗೊಡಿರಿ.
2ನನ್ನ ಪ್ರಾರ್ಥನೆ ನಿಮ್ಮ ಮುಂದೆ ಧೂಪವಾಗಿರಲಿ, ನಾನು ನಿಮ್ಮ ಕಡೆ ಕೈ ಎತ್ತುವುದು ಸಾಯಂಕಾಲದ ಬಲಿಯಂತೆ ನಿಮಗೆ ಸಮರ್ಪಕವಾಗಿರಲಿ.
3ಯೆಹೋವ ದೇವರೇ, ನನ್ನ ಬಾಯಿಗೆ ಕಾವಲಿಡಿರಿ; ನನ್ನ ತುಟಿಗಳ ಕದವನ್ನು ಕಾಯಿರಿ;
4ಅಪರಾಧ ಮಾಡುವವರ ಸಂಗಡ ನಾನು ಸಹ ಸೇರಿಕೊಂಡು ಕೆಟ್ಟ ಕಾರ್ಯಗಳನ್ನು ಮಾಡಲು ನನ್ನ ಹೃದಯ ಸೆಳೆಯದಂತೆ ಕಾಪಾಡಿರಿ; ಅವರ ಸವಿ ಊಟಗಳನ್ನು ನಾನು ಉಣ್ಣದಿರಲಿ.
5ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ. ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ; ನನ್ನ ತಲೆ ಅದನ್ನು ಬೇಡವೆನ್ನದಿರಲಿ; ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು.
6ಅವರ ನ್ಯಾಯಾಧಿಪತಿಗಳು ಉನ್ನತ ಸ್ಥಳದಿಂದ ಕೆಳಬಿದ್ದಾಗ ಅವರು ನನ್ನ ಮಾತು ಕೇಳುವರು.
7ಅವರು ಹೀಗೆ ಹೇಳುವರು, “ಒಬ್ಬನು ಹೊಲವನ್ನು ಉತ್ತು, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳ ದ್ವಾರದಲ್ಲಿ ಎರಚಲಾಗುವುದು.”
8ಆದರೆ ಸಾರ್ವಭೌಮ ಯೆಹೋವ ದೇವರೇ, ನನ್ನ ಕಣ್ಣುಗಳು ನಿಮ್ಮ ಕಡೆ ಇವೆ; ನಿಮ್ಮನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡಿರಿ.
9ಅವರು ನನಗೆ ಒಡ್ಡಿದ ಉರುಲಿನಿಂದಲೂ, ಅಪರಾಧಗಳ ನೇಣುಗಳಿಂದಲೂ ನನ್ನನ್ನು ಕಾಪಾಡಿರಿ.
10ನಾನು ತಪ್ಪಿಸಿಕೊಂಡು ಸುರಕ್ಷಿತವಾಗಿ ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿಯೇ ಬೀಳಲಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.