
ಕೀರ್ತನೆಗಳು 142
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 142 ಏಕಾಂಗಿತನ, ಅಪಾಯ ಮತ್ತು ತೋರಿಕೆಯ ಪರಿತ್ಯಾಗದಿಂದ ಪ್ರಾಮಾಣಿಕ ದೂರನ್ನು ಸುರಿಯುತ್ತದೆ. ಯಾವ ಮಾನವ ಆಶ್ರಯವೂ ಕಾಣದಿರುವಾಗ, ಗುಹೆಯ ಪ್ರಾರ್ಥನೆಯು ದೇವರನ್ನು ಪಾಲು ಎಂದು ಹೆಸರಿಸಿ ಕೃತಜ್ಞ ಸಮುದಾಯದೊಳಗೆ ಬಿಡುಗಡೆಯನ್ನು ನಿರೀಕ್ಷಿಸುತ್ತದೆ.
ಏಕಾಂಗಿತನಆಶ್ರಯದೂರುರಕ್ಷಣೆ
1ನನ್ನ ಸ್ವರವೆತ್ತಿ ಯೆಹೋವ ದೇವರಿಗೆ ಮೊರೆಯಿಟ್ಟಿದ್ದೇನೆ; ಸ್ವರವೆತ್ತಿ ನನ್ನ ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದೇನೆ.
2ದೇವರ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ದೇವರ ಮುಂದೆ ತಿಳಿಸಿದ್ದೇನೆ.
3ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ, ದೇವರೇ ನೀವು ನನ್ನ ದಾರಿಯನ್ನು ಕಾಯುತ್ತೀರಿ; ನಾನು ನಡೆಯುವ ದಾರಿಯಲ್ಲಿ ವೈರಿಗಳು ಗುಪ್ತವಾಗಿ ನನಗೆ ಉರುಲನ್ನು ಒಡ್ಡಿದ್ದಾರೆ.
4ನೋಡಿರಿ ನನ್ನ ಬಲಗಡೆಯಲ್ಲಿ, ನನ್ನ ಪರವಾಗಿ ಯಾರೂ ಇಲ್ಲ; ಆಶ್ರಯವು ನನಗೆ ಇಲ್ಲ; ನನಗಾಗಿ ಚಿಂತಿಸುವವರು ಯಾರೂ ಇಲ್ಲ.
5ಯೆಹೋವ ದೇವರೇ, ನಿಮಗೆ ಹೀಗೆಂದು ಮೊರೆಯಿಡುತ್ತೇನೆ: “ನೀವು ನನ್ನ ಆಶ್ರಯವೂ, ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀರಿ.”
6ನನ್ನ ಕೂಗನ್ನು ಆಲೈಸಿರಿ, ಏಕೆಂದರೆ ನಾನು ಬಹಳ ಕುಂದಿಹೋಗಿದ್ದೇನೆ; ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸಿರಿ, ಏಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ.
7ನಿಮ್ಮ ಹೆಸರನ್ನು ಕೊಂಡಾಡುವ ಹಾಗೆ ನನ್ನ ಸೆರೆಯಿಂದ ನನ್ನನ್ನು ಬಿಡಿಸಿರಿ; ಆಗ ನೀವು ನನಗೆ ಮಾಡಿದ ಉಪಕಾರವನ್ನು ಕಂಡು ನೀತಿವಂತರು ನನ್ನ ಹತ್ತಿರ ಸೇರಿಬರುವರು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.