A royal bier departs while prisoners are freed and widows, immigrants, hungry families, and blind elders receive help

ಕೀರ್ತನೆಗಳು 146

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 146 ಯೋಜನೆಗಳು ತಮ್ಮೊಂದಿಗೆ ಸಾಯುವ ಮರ್ತ್ಯ ಆಡಳಿತಗಾರರಲ್ಲಿ ಅಂತಿಮ ನಿರೀಕ್ಷೆಯಿಡದಂತೆ ಎಚ್ಚರಿಸುತ್ತದೆ. ಶಾಶ್ವತ ಸಹಾಯವು ಬದಲಾಗಿ ಸಮಾಜದ ದುರ್ಬಲ ಜನರಿಗೆ ನ್ಯಾಯ, ಆಹಾರ, ಸ್ವಾತಂತ್ರ್ಯ, ದೃಷ್ಟಿ, ಸ್ವಾಗತ, ರಕ್ಷಣೆ ಮತ್ತು ಆಧಾರವನ್ನು ಸೃಷ್ಟಿಸುತ್ತದೆ.
ನಿರೀಕ್ಷೆನ್ಯಾಯದುರ್ಬಲರುಆಡಳಿತಗಾರರು
1ಯೆಹೋವ ದೇವರನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಯೆಹೋವ ದೇವರನ್ನು ಸ್ತುತಿಸು.
2ನಾನು ಬದುಕುವವರೆಗೂ ಯೆಹೋವ ದೇವರನ್ನು ಸ್ತುತಿಸುವೆನು; ನಾನು ಇರುವವರೆಗೂ ನನ್ನ ದೇವರನ್ನು ಸ್ತುತಿಸುವೆನು.
3ಅಧಿಪತಿಗಳಲ್ಲಿಯೂ ರಕ್ಷಿಸಲಾಗದ ಮಾನವರಲ್ಲಿಯೂ ಭರವಸವಿಡಬೇಡಿರಿ.
4ಅವರ ಶ್ವಾಸವು ಹೋಗಲು ಮಣ್ಣಿಗೆ ಸೇರುತ್ತಾರೆ, ಅದೇ ದಿವಸದಲ್ಲಿ ಅವರ ಆಲೋಚನೆಗಳೆಲ್ಲಾ ನಾಶವಾಗುತ್ತವೆ.
5ಯಾಕೋಬನ ದೇವರನ್ನು ತಮ್ಮ ಸಹಾಯಕರಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಯೆಹೋವ ದೇವರ ಮೇಲೆ ನಿರೀಕ್ಷೆ ಇಡುವನು.
6ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದ ದೇವರೇ ಎಂದೆಂದಿಗೂ ನಂಬಿಗಸ್ತರು.
7ಅವರು ದಬ್ಬಾಳಿಕೆಯಾದ ನ್ಯಾಯತೀರಿಸುತ್ತಾರೆ, ಹಸಿದವರಿಗೆ ಆಹಾರವನ್ನು ಕೊಡುತ್ತಾರೆ. ಯೆಹೋವ ದೇವರು ಸೆರೆಯವರನ್ನು ಬಿಡಿಸುತ್ತಾರೆ.
8ಯೆಹೋವ ದೇವರು ಕುರುಡರ ಕಣ್ಣುಗಳನ್ನು ತೆರೆಯುತ್ತಾರೆ. ಅವರು ದೀನರನ್ನು ಎತ್ತುತ್ತಾರೆ. ನೀತಿವಂತರನ್ನು ಪ್ರೀತಿಸುತ್ತಾರೆ.
9ಯೆಹೋವ ದೇವರು ಪರದೇಶಸ್ಥರನ್ನು ಕಾಪಾಡುತ್ತಾರೆ. ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಉದ್ಧರಿಸುತ್ತಾರೆ. ಆದರೆ ದುಷ್ಟರ ಮಾರ್ಗವನ್ನು ಬೇಸರಪಡಿಸುತ್ತಾರೆ.
10ಚೀಯೋನೇ, ನಿಮ್ಮ ದೇವರಾದ ಯೆಹೋವ ದೇವರು ತಲತಲಾಂತರಕ್ಕೂ, ಸರ್ವ ಸಂತತಿಗಳವರೆಗೂ ಆಳಿಕೆ ಮಾಡುತ್ತಾರೆ. ಯೆಹೋವ ದೇವರಿಗೆ ಸ್ತೋತ್ರ.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.