
ಕೀರ್ತನೆಗಳು 20
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 20 ಸಂಘರ್ಷದ ಮೊದಲು ತಮ್ಮ ಅರಸನಿಗಾಗಿ ಪ್ರಾರ್ಥಿಸಲು ಜನರನ್ನು ಒಟ್ಟುಗೂಡಿಸುತ್ತದೆ. ಕಾಣಿಕೆಗಳು, ಯೋಜನೆಗಳು ಮತ್ತು ನಾಯಕತ್ವವನ್ನು ದೇವರಿಗೆ ಒಪ್ಪಿಸಲಾಗುತ್ತದೆ, ಆದರೆ ಭರವಸೆಯು ರಥಗಳ ಮತ್ತು ಕುದುರೆಗಳ ತೋರಿಕೆಯ ಬಲವನ್ನು ಮೀರಿ ನೆಲೆಸುತ್ತದೆ.
ಪ್ರಾರ್ಥನೆಅರಸುತನಭರವಸೆಸಮುದಾಯ
1ಯೆಹೋವ ದೇವರು ಇಕ್ಕಟ್ಟಿನಲ್ಲಿ ನಿಮಗೆ ಉತ್ತರವನ್ನು ನೀಡಲಿ; ಯಾಕೋಬನ ದೇವರ ಹೆಸರು ನಿಮ್ಮನ್ನು ಕಾಪಾಡಲಿ.
2ದೇವರು ಪರಿಶುದ್ಧ ಸ್ಥಳದೊಳಗಿಂದ ನಿಮಗೆ ಸಹಾಯ ಕಳುಹಿಸಲಿ; ಅವರು ಚೀಯೋನಿನಿಂದ ನಿಮಗೆ ಆಧಾರ ನೀಡಲಿ.
3ನಿಮ್ಮ ಯಜ್ಞಾರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿಕೊಂಡು, ನಿಮ್ಮ ದಹನಬಲಿಗಳನ್ನು ಸ್ವೀಕರಿಸಲಿ.
4ದೇವರು ನಿಮ್ಮ ಹೃದಯದ ಬಯಕೆಯನ್ನು ನಿಮಗೆ ದಯಪಾಲಿಸಲಿ; ನಿಮ್ಮ ಎಲ್ಲಾ ಯೋಜನೆಗಳಲ್ಲಿಯೂ ಯಶಸ್ಸನ್ನು ನೀಡಲಿ.
5ನಾವು ದೇವರ ಜಯದಲ್ಲಿ ಆನಂದ ಘೋಷಮಾಡಿ, ನಮ್ಮ ದೇವರ ಹೆಸರಿನಲ್ಲಿಯೇ ನಾವು ನಮ್ಮ ಧ್ವಜಗಳನ್ನು ಎತ್ತುವೆವು. ಯೆಹೋವ ದೇವರು ನಿಮ್ಮ ಬಿನ್ನಹಗಳನ್ನೆಲ್ಲಾ ಪೂರೈಸಲಿ.
6ಈಗ ನಾನು ಇದನ್ನು ಬಲ್ಲೆನು: ಯೆಹೋವ ದೇವರು ತಮ್ಮ ಅಭಿಷಿಕ್ತನಿಗೆ ಜಯ ನೀಡುವರು. ತಮ್ಮ ಜಯದ ಬಲಗೈಯ ಶಕ್ತಿಯಿಂದಲೂ ತಮ್ಮ ಪರಿಶುದ್ಧ ಪರಲೋಕದಿಂದಲೂ ಅವನಿಗೆ ಉತ್ತರಕೊಡುವರು.
7ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳಲ್ಲಿಯೂ ಭರವಸೆಯಿಡುತ್ತಾರೆ; ನಾವಾದರೋ ನಮ್ಮ ಯೆಹೋವ ದೇವರ ಹೆಸರಿನಲ್ಲಿ ಭರವಸೆಯನ್ನಿಡುತ್ತೇವೆ.
8ಅವರು ಬಗ್ಗಿ ಬೀಳುತ್ತಾರೆ, ನಾವಾದರೋ ಎದ್ದು ಸ್ಥಿರವಾಗಿ ನಿಲ್ಲುವೆವು.
9ಯೆಹೋವ ದೇವರೇ, ಅರಸನಿಗೆ ಜಯಕೊಡಿರಿ! ನಾವು ಕರೆಯುವಾಗ ನಮಗೆ ಉತ್ತರಕೊಡಿರಿ!
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.