A shepherd leads sheep beside water, through a ravine, and toward an abundant table

ಕೀರ್ತನೆಗಳು 23

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 23 ಕುರುಬನ ಗಮನಪೂರ್ವಕ ಆರೈಕೆಯ ಕೆಳಗಿನ ಜೀವನವನ್ನು ಚಿತ್ರಿಸುತ್ತದೆ: ವಿಶ್ರಾಂತಿ, ಪುನಃಸ್ಥಾಪನೆ, ಸರಿಯಾದ ಮಾರ್ಗಗಳು, ಆಳವಾದ ನೆರಳಿನಲ್ಲಿ ಧೈರ್ಯ, ಸಮೃದ್ಧ ಮೇಜು, ಅಭಿಷೇಕ ಮತ್ತು ಮನೆಯಲ್ಲಿ ಶಾಶ್ವತ ಸ್ವಾಗತ ಮತ್ತು ಸೇರುವಿಕೆಯ ವಾಗ್ದಾನ.
ಕುರುಬಪೂರೈಕೆರಕ್ಷಣೆಮನೆ
1ಯೆಹೋವ ದೇವರು ನನ್ನ ಕುರುಬ ಆಗಿದ್ದಾರೆ, ನನಗೆ ಕೊರತೆಯೇ ಇಲ್ಲ.
2ಅವರು ಹಸಿರುಗಾವಲುಗಳಲ್ಲಿ ನನ್ನನ್ನು ವಿಶ್ರಮಿಸುವಂತೆ ಮಾಡುತ್ತಾರೆ; ಪ್ರಶಾಂತ ಜಲರಾಶಿಯ ಬಳಿಗೆ ನನ್ನನ್ನು ನಡೆಸುತ್ತಾರೆ.
3ಅವರು ನನ್ನ ಪ್ರಾಣವನ್ನು ಚೈತನ್ಯಗೊಳಿಸುತ್ತಾರೆ. ತಮ್ಮ ಹೆಸರಿನ ನಿಮಿತ್ತ ನನ್ನನ್ನು ನೀತಿ ಮಾರ್ಗದಲ್ಲಿ ನಡೆಸುತ್ತಾರೆ.
4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀವು ನನ್ನೊಂದಿಗಿರುವುದರಿಂದ ನಾನು ಕೇಡಿಗೆ ಹೆದರೆನು; ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ ನನ್ನನ್ನು ಸಂತೈಸುತ್ತವೆ.
5ನೀವು ನನ್ನ ವೈರಿಗಳ ಮುಂದೆಯೇ ನನಗೊಂದು ಔತಣವನ್ನು ಸಿದ್ಧಮಾಡುತ್ತೀರಿ. ನೀವು ನನ್ನ ತಲೆಗೆ ತೈಲವನ್ನು ಅಭಿಷೇಕಿಸುತ್ತೀರಿ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
6ನಿಶ್ಚಯವಾಗಿ ಶುಭವೂ ಪ್ರೀತಿಯೂ ನನ್ನ ಜೀವಮಾನವೆಲ್ಲಾ ನನ್ನನ್ನು ಹಿಂಬಾಲಿಸುತ್ತವೆ; ನಾನು ಯೆಹೋವ ದೇವರ ಮನೆಯಲ್ಲಿ ಸದಾಕಾಲವೂ ವಾಸಿಸುವೆನು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.