
ಕೀರ್ತನೆಗಳು 24
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 24 ಇಡೀ ಲೋಕವನ್ನು ದೇವರ ಸ್ವತ್ತೆಂದು ಘೋಷಿಸಿ, ಶುದ್ಧ ಕೈಗಳಿಂದಲೂ ಸತ್ಯ ಹೃದಯಗಳಿಂದಲೂ ಯಾರು ಏರಬಹುದು ಎಂದು ಕೇಳಿ, ಮಹಿಮೆಯ ಅರಸನನ್ನು ಭವ್ಯ ಮೆರವಣಿಗೆಯ ಮೂಲಕ ಸ್ವಾಗತಿಸುವಂತೆ ಪುರಾತನ ಬಾಗಿಲುಗಳನ್ನು ಕರೆಯುತ್ತದೆ.
ಸೃಷ್ಟಿಯಥಾರ್ಥತೆಆರಾಧನೆಮಹಿಮೆ
1ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ; ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು.
2ಏಕೆಂದರೆ ಅವರು ಸಮುದ್ರಗಳ ಮೇಲೆ ಅದನ್ನು ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರಪಡಿಸಿದ್ದಾರೆ.
3ಯೆಹೋವ ದೇವರ ಪರ್ವತವನ್ನು ಹತ್ತುವವನು ಯಾರು? ಅವರ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?
4ಶುದ್ಧಹಸ್ತಗಳೂ ನಿರ್ಮಲವಾದ ಹೃದಯವೂ ಉಳ್ಳವನಾಗಿದ್ದು; ವಂಚನೆಯಿಂದ ಮುಕ್ತನಾಗಿ, ಮೋಸದಿಂದ ಆಣೆ ಇಡದೆಯೂ ಇರುವವನೇ.
5ಇಂಥವರೇ ಯೆಹೋವ ದೇವರಿಂದ ಆಶೀರ್ವಾದವನ್ನು ಹೊಂದುವರು. ತಮ್ಮ ರಕ್ಷಕ ಆಗಿರುವ ದೇವರಿಂದಲೇ ನಿರ್ದೋಷಿಯಾಗುವರು.
6ಇಂಥವರೇ ದೇವರನ್ನು ಹುಡುಕುವ ಸಂತತಿಯು; ಯಾಕೋಬನ ದೇವರೇ, ನಿಮ್ಮನ್ನು ಹುಡುಕುವವರು ಇಂಥವರೇ.
7ದ್ವಾರಗಳೇ ತಲೆ ಎತ್ತಿ ನೋಡಿರಿ, ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ; ಮಹಿಮೆಯ ಅರಸ ಒಳಗೆ ಬರಲಿದ್ದಾರೆ.
8ಈ ಮಹಿಮೆಯ ಅರಸ ಯಾರು? ಬಲವೂ ಪರಾಕ್ರಮವೂ ಉಳ್ಳ ಯೆಹೋವ ದೇವರೇ ಆಗಿರುತ್ತಾರೆ. ಯೆಹೋವ ದೇವರು ಯುದ್ಧದಲ್ಲಿ ಪರಾಕ್ರಮವುಳ್ಳವರು ಆಗಿರುತ್ತಾರೆ.
9ದ್ವಾರಗಳೇ, ತಲೆ ಎತ್ತಿ ನೋಡಿರಿ, ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ; ಮಹಿಮೆಯ ಅರಸ ಒಳಗೆ ಬರಲಿದ್ದಾರೆ.
10ಮಹಿಮೆಯ ಅರಸ ಯಾರು? ಸೇನಾಧೀಶ್ವರ ಯೆಹೋವ ದೇವರೇ ಆಗಿರುತ್ತಾರೆ. ಇವರೇ ಮಹಿಮೆಯ ಅರಸರು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.