
ಕೀರ್ತನೆಗಳು 26
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 26 ಪರಿಶೋಧಿಸುವ ಪರೀಕ್ಷೆಯನ್ನು ಕೇಳಿ, ಮೋಸ, ಲಂಚ ಮತ್ತು ಹಿಂಸೆಯ ಉದ್ದೇಶಪೂರ್ವಕ ನಿರಾಕರಣೆಯನ್ನು ದೃಢಪಡಿಸುತ್ತದೆ. ಆರಾಧನೆಯ ಸ್ಥಳದ ಮೇಲಿನ ಪ್ರೀತಿಯು ಕೃತಜ್ಞತೆಗೂ ಒಟ್ಟುಗೂಡಿದ ಸಮುದಾಯದ ನಡುವೆ ಸ್ಥಿರ ನೆಲೆಗೂ ನಡೆಸುತ್ತದೆ.
ಯಥಾರ್ಥತೆಪರೀಕ್ಷೆಆರಾಧನೆಕೃತಜ್ಞತೆ
1ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ, ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ; ನಾನು ಯೆಹೋವ ದೇವರಲ್ಲಿ ಕದಲದೆ ಭರವಸೆ ಇಟ್ಟಿದ್ದೇನೆ.
2ಯೆಹೋವ ದೇವರೇ, ನನ್ನನ್ನು ಶೋಧಿಸಿ, ಪರೀಕ್ಷಿಸಿರಿ; ನನ್ನ ಅಂತರಿಂದ್ರಿಯಗಳನ್ನೂ ನನ್ನ ಹೃದಯವನ್ನೂ ಶೋಧಿಸಿರಿ.
3ನಿಮ್ಮ ಒಡಂಬಡಿಕೆಯ ಪ್ರೀತಿಯು ಯಾವಾಗಲೂ ನನ್ನ ಮನಸ್ಸು ತುಂಬ ಇದೆ; ನಿಮ್ಮ ನಂಬಿಗಸ್ತಿಕೆಯಲ್ಲಿ ನಾನು ಬಾಳುತ್ತಿದ್ದೇನೆ.
4ಮೋಸಗಾರರ ಸಂಗಡ ನಾನು ಕುಳಿತುಕೊಳ್ಳಲಿಲ್ಲ; ವಂಚಕರ ಸಂಗಡ ನಾನು ಹೋಗುವುದಿಲ್ಲ.
5ದುರ್ಮಾರ್ಗಿಗಳ ಸಭೆಯನ್ನು ದ್ವೇಷಿಸಿದ್ದೇನೆ; ದುಷ್ಟರ ಸಂಗಡ ಕುಳಿತುಕೊಳ್ಳುವುದಿಲ್ಲ.
6ನನ್ನ ಕೈಗಳನ್ನು ನಿರ್ಮಲವಾಗಿ ತೊಳೆದುಕೊಂಡು, ಯೆಹೋವ ದೇವರೇ, ನಿಮ್ಮ ಬಲಿಪೀಠವನ್ನು ಸುತ್ತುತ್ತಾ,
7ಸ್ತೋತ್ರ ಧ್ವನಿಯೆತ್ತಿ ಸಾರುತ್ತಾ ನಿಮ್ಮ ಅದ್ಭುತಗಳನ್ನೆಲ್ಲಾ ತಿಳಿಸುವೆನು.
8ಯೆಹೋವ ದೇವರೇ, ನೀವು ವಾಸಿಸುವ ಆಲಯವನ್ನೂ, ನಿಮ್ಮ ಮಹಿಮೆಯ ನಿವಾಸವನ್ನೂ ಪ್ರೀತಿಸುತ್ತೇನೆ.
9ಪಾಪಿಗಳ ಸಂಗಡ ನನ್ನ ಪ್ರಾಣವನ್ನೂ, ರಕ್ತಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡಿರಿ.
10ಅವರ ಕೈಗಳಲ್ಲಿ ಕೇಡು ಇದೆ; ಅವರ ಬಲಗೈ ಲಂಚಗಳಿಂದ ತುಂಬಿದೆ.
11ನಾನಾದರೋ ನನ್ನ ಯಥಾರ್ಥತೆಯಲ್ಲಿ ನಡೆಯುತ್ತೇನೆ; ನನ್ನನ್ನು ವಿಮೋಚಿಸಿರಿ; ನನಗೆ ಕರುಣೆಯುಳ್ಳವರಾಗಿರಿ.
12ನನ್ನ ಪಾದವು ಸಮ ನೆಲದಲ್ಲಿ ನಿಂತಿದೆ; ನಾನು ಮಹಾಸಭೆಯಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.