A violent thunderstorm breaks a cedar as worshipers watch safely from a stone sanctuary

ಕೀರ್ತನೆಗಳು 29

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 29 ಸಮುದ್ರದಿಂದ ಕಾಡಿಗೂ ಅರಣ್ಯಕ್ಕೂ ಚಲಿಸುವ ಗುಡುಗಿನ ಮೂಲಕ ದೈವಿಕ ಮಹಿಮೆಯನ್ನು ಕೇಳುತ್ತದೆ. ಸೃಷ್ಟಿ ನಡುಗುತ್ತದೆ, ಆರಾಧನೆಯು ವಿಸ್ಮಯದಿಂದ ಪ್ರತಿಕ್ರಿಯಿಸುತ್ತದೆ, ಮತ್ತು ಅಗಾಧ ಪ್ರದರ್ಶನವು ಜನರಿಗೆ ಬಲ ಮತ್ತು ಶಾಂತಿಯೊಂದಿಗೆ ಕೊನೆಗೊಳ್ಳುತ್ತದೆ.
ಬಿರುಗಾಳಿಸೃಷ್ಟಿಮಹಿಮೆಶಾಂತಿ
1ದೇವದೂತರೇ, ಬಲವು ಯೆಹೋವ ದೇವರದೇ, ಮಹಿಮೆ ಯೆಹೋವ ದೇವರದೇ ಎಂದು ಹೇಳಿ ಕೊಂಡಾಡಿರಿ.
2ಯೆಹೋವ ದೇವರ ನಾಮಕ್ಕೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ವಸ್ತ್ರದೊಡನೆ ಯೆಹೋವ ದೇವರನ್ನು ಆರಾಧಿಸಿರಿ.
3ಯೆಹೋವ ದೇವರ ಧ್ವನಿಯು ಜಲರಾಶಿಗಳ ಮೇಲೆ ಇದೆ; ಮಹಿಮೆಯ ದೇವರು ಇದ್ದಾರೆ; ಯೆಹೋವ ದೇವರು ಮಹಾಸಾಗರಗಳ ಮೇಲೆ ಇದ್ದಾರೆ.
4ಯೆಹೋವ ದೇವರ ಧ್ವನಿಯು ಶಕ್ತಿಯುಳ್ಳದ್ದು; ಯೆಹೋವ ದೇವರ ಧ್ವನಿಯು ವೈಭವವುಳ್ಳದ್ದು.
5ಯೆಹೋವ ದೇವರ ಧ್ವನಿಯು ದೇವದಾರು ವೃಕ್ಷಗಳನ್ನು ಮುರಿಯುತ್ತದೆ; ಯೆಹೋವ ದೇವರು ಲೆಬನೋನಿನ ದೇವದಾರು ವೃಕ್ಷಗಳನ್ನು ಮುರಿಯುತ್ತಾರೆ.
6ಲೆಬನೋನ್ ಪರ್ವತವು ಕರುವಿನ ಹಾಗೆಯೂ ಸಿರ್ಯೋನ್ ಬೆಟ್ಟವು ಎಳೆಯ ಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾರೆ.
7ಯೆಹೋವ ದೇವರ ಧ್ವನಿಯು ಸಿಡಿಲಿನ ಮಿಂಚಿನಂತೆ ಅಪ್ಪಳಿಸುತ್ತದೆ.
8ಯೆಹೋವ ದೇವರ ಶಬ್ದವು ಮರುಭೂಮಿಯನ್ನು ನಡುಗಿಸುತ್ತದೆ; ಯೆಹೋವ ದೇವರು ಕಾದೇಶ್ ಮರುಭೂಮಿಯನ್ನು ನಡುಗಿಸುತ್ತಾರೆ.
9ಯೆಹೋವ ದೇವರ ಧ್ವನಿಯು ಜಿಂಕೆಗಳು ಈಯುವಂತೆ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ದೇವರ ಮಂದಿರದಲ್ಲಿ ಪ್ರತಿಯೊಬ್ಬರೂ “ಮಹಿಮೆ!” ಎಂದು ಘೋಷಿಸುತ್ತಾರೆ.
10ಯೆಹೋವ ದೇವರು ಪ್ರಳಯದ ಮೇಲೆ ಕುಳಿತುಕೊಳ್ಳುತ್ತಾರೆ; ಯುಗಯುಗಕ್ಕೂ ಯೆಹೋವ ದೇವರು ಅರಸರಾಗಿ ಕುಳಿತುಕೊಂಡಿದ್ದಾರೆ.
11ಯೆಹೋವ ದೇವರು ತಮ್ಮ ಜನರಿಗೆ ಬಲವನ್ನು ಕೊಡುವರು; ಯೆಹೋವ ದೇವರು ತಮ್ಮ ಜನರನ್ನು ಸಮಾಧಾನದಿಂದ ಆಶೀರ್ವದಿಸುವರು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.