
ಕೀರ್ತನೆಗಳು 3
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಪಲಾಯನದ ಸಮಯದಲ್ಲಿ ಸುತ್ತುವರಿಯಲ್ಪಟ್ಟ ಕೀರ್ತನೆಗಾರನು ಅಪಾಯವನ್ನೂ ತನ್ನ ಗೌರವವನ್ನೂ ದೇವರಿಗೆ ಒಪ್ಪಿಸುತ್ತಾನೆ. ರಕ್ಷಣೆಯು ಗುರಾಣಿಯಾಗುತ್ತದೆ, ಪ್ರಾರ್ಥನೆಗೆ ಉತ್ತರ ಸಿಗುತ್ತದೆ, ಮತ್ತು ಎಲ್ಲಾ ಕಡೆಯ ಅಗಾಧ ವಿರೋಧದ ನಡುವೆಯೂ ಸುರಕ್ಷಿತ ನಿದ್ರೆಯು ಹೊಸ ಧೈರ್ಯಕ್ಕೆ ನಡೆಸುತ್ತದೆ.
ಆಶ್ರಯಪ್ರಾರ್ಥನೆರಕ್ಷಣೆಧೈರ್ಯ
1ಯೆಹೋವ ದೇವರೇ, ನನ್ನ ವೈರಿಗಳು ಬಹುಜನ! ನನಗೆ ವಿರೋಧವಾಗಿ ಏಳುವವರು ಎಷ್ಟೋ ಜನ!
2“ದೇವರು ಅವನನ್ನು ಬಿಡುಗಡೆ ಮಾಡುವುದಿಲ್ಲ,” ಎಂದು ಅನೇಕರು ನನ್ನ ಬಗ್ಗೆ ಹೇಳುತ್ತಾರೆ.
3ಆದರೆ ಯೆಹೋವ ದೇವರೇ, ನೀವೇ ನನ್ನ ಸುತ್ತಲಿರುವ ಗುರಾಣಿಯೂ, ನನ್ನ ಮಹಿಮೆಯೂ ನನ್ನ ತಲೆ ಮೇಲೆತ್ತುವವರೂ ಆಗಿದ್ದೀರಿ.
4ನಾನು ನನ್ನ ಧ್ವನಿಯೆತ್ತಿ ಯೆಹೋವ ದೇವರಿಗೆ ಮೊರೆಯಿಡುವೆನು, ಅವರು ತಮ್ಮ ಪರಿಶುದ್ಧ ಪರ್ವತದಿಂದ ನನಗೆ ಉತ್ತರಕೊಡುವರು.
5ನಾನು ಮಲಗಿ ನಿದ್ರಿಸುವೆನು; ಯೆಹೋವ ದೇವರು ನನ್ನನ್ನು ಕಾಪಾಡಿದ್ದರಿಂದ ನಾನು ಎಚ್ಚರಗೊಂಡೆನು.
6ಸಾವಿರಾರು ಜನರು ನನಗೆ ವಿರೋಧವಾಗಿ ನನ್ನ ಸುತ್ತುವರಿದರೂ ನಾನು ಭಯಪಡೆನು.
7ಯೆಹೋವ ದೇವರೇ, ಏಳಿರಿ! ನನ್ನ ದೇವರೇ, ನನ್ನನ್ನು ರಕ್ಷಿಸಿರಿ. ನನ್ನ ಶತ್ರುಗಳೆಲ್ಲರ ದವಡೆಗೆ ಹೊಡೆಯಿರಿ; ದುಷ್ಟರ ಹಲ್ಲುಗಳನ್ನು ಮುರಿದುಬಿಡಿರಿ.
8ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು. ನಿಮ್ಮ ಜನರ ಮೇಲೆ ನಿಮ್ಮ ಆಶೀರ್ವಾದವಿರಲಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.