A grieving man confesses to an elder before joining musicians and neighbors in sunlight

ಕೀರ್ತನೆಗಳು 32

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 32 ಕ್ಷಮಿಸಲ್ಪಟ್ಟ ಅಪರಾಧದ ಸ್ವಾತಂತ್ರ್ಯವನ್ನು ಕೊಂಡಾಡುತ್ತದೆ. ಮರೆಮಾಚುವಿಕೆಯು ಜೀವವನ್ನು ಬತ್ತಿಸುತ್ತದೆ, ಆದರೆ ಪ್ರಾಮಾಣಿಕ ಅರಿಕೆಯು ಸಂತೋಷವನ್ನು ಪುನಃಸ್ಥಾಪಿಸುತ್ತದೆ; ಕ್ಷಮಿಸಲ್ಪಟ್ಟ ವ್ಯಕ್ತಿಯು ನಂತರ ಜ್ಞಾನದ ಉಪದೇಶವನ್ನು ಪಡೆದು ಯಥಾರ್ಥರ ಸಮುದಾಯದ ಆನಂದದ ಸ್ತುತಿಯಲ್ಲಿ ಸೇರುತ್ತಾನೆ.
ಕ್ಷಮೆಅರಿಕೆಉಪದೇಶಸಂತೋಷ
1ಯಾರ ಉಲ್ಲಂಘನೆಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು.
2ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ, ಯಾರ ಆತ್ಮದಲ್ಲಿ ವಂಚನೆ ಇರುವುದಿಲ್ಲವೋ ಆ ಮನುಷ್ಯನು ಧನ್ಯನು.
3ನಾನು ನನ್ನ ಪಾಪವನ್ನು ಅರಿಕೆ ಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದು ಹೋದವು.
4ದೇವರೇ, ರಾತ್ರಿ ಹಗಲು ನಿಮ್ಮ ಕೈ ನನ್ನ ಮೇಲೆ ಭಾರವಾಗಿತ್ತು; ನನ್ನ ಬಲವು ಬೇಸಿಗೆಯ ಬಿಸಿಲಿನಲ್ಲಿ ಕುಂದಿಹೋಗುವಂತೆ ಆಯಿತು.
5ನನ್ನ ಪಾಪವನ್ನು ನಿಮಗೆ ತಿಳಿಸಿ, ನನ್ನ ಅನ್ಯಾಯವನ್ನು ಮರೆಮಾಡದೆ, “ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ ಅರಿಕೆ ಮಾಡುವೆನು,” ಎಂದು ಹೇಳಿದೆನು; ಆಗ, ನೀವು ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.
6ಆದುದರಿಂದ ಭಕ್ತರೆಲ್ಲರು ನೀವು ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ; ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು ಅವರ ಸಮೀಪಕ್ಕೆ ಬರುವುದಿಲ್ಲ.
7ನೀವು ನನಗೆ ಮರೆಮಾಡುವ ಸ್ಥಳವಾಗಿರುವಿರಿ; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀರಿ; ವಿಮೋಚನಾ ಧ್ವನಿಗಳಿಂದ ನೀವು ನನ್ನನ್ನು ಸುತ್ತುವರಿಯುತ್ತೀರಿ.
8ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿನಗೆ ಬುದ್ಧಿ ಹೇಳಿ, ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಮೆಚ್ಚುಗೆಯಿಂದ ನಿನ್ನನ್ನು ನಡೆಸುವೆನು.
9ವಿವೇಕವಿಲ್ಲದ ಕುದುರೆಯ ಹಾಗೆಯೂ, ಹೇಸರಗತ್ತೆಯ ಹಾಗೆಯೂ ಇರಬೇಡಿರಿ; ಬಾರಿನಿಂದಲೂ, ಕಡಿವಾಣದಿಂದಲೂ ಅವುಗಳನ್ನು ನಿಯಂತ್ರಿಸಬೇಕು, ಇಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.
10ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಯೆಹೋವ ದೇವರಲ್ಲಿ ಭರವಸವಿಡುವವನನ್ನು ಅದರ ಒಂಡಬಡಿಕೆಯ ಪ್ರೀತಿಯು ಸುತ್ತುವರಿಯುವುದು.
11ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯ ಉಳ್ಳವರೇ, ಜಯಗೀತೆ ಹಾಡಿರಿ.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.