
ಕೀರ್ತನೆಗಳು 4
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 4 ಸಂಕಟ, ಕೋಪ ಮತ್ತು ವ್ಯರ್ಥ ಬೆನ್ನಟ್ಟುವಿಕೆಯನ್ನು ಪ್ರಾಮಾಣಿಕ ಸಂಜೆಯ ಪ್ರಾರ್ಥನೆಗೆ ತರುತ್ತದೆ. ಕೀರ್ತನೆಗಾರನು ಭೌತಿಕ ಸಮೃದ್ಧಿಗಿಂತ ಆಳವಾದ ಸಂತೋಷವನ್ನು ಕಂಡುಕೊಂಡು, ದೇವರ ರಕ್ಷಣೆಯ ಆರೈಕೆಯಲ್ಲಿ ಸ್ಥಿರ ಭರವಸೆಯಿಂದ ಸುರಕ್ಷಿತವಾಗಿ ಮಲಗುತ್ತಾನೆ.
ಸಂಜೆಯ ಪ್ರಾರ್ಥನೆಭರವಸೆಶಾಂತಿಸಂತೋಷ
1ನನ್ನ ನೀತಿಯಾಗಿರುವ ದೇವರೇ, ನಾನು ಕರೆಯುವಾಗ ನನಗೆ ಸದುತ್ತರವನ್ನು ಕೊಡಿರಿ. ನನ್ನ ಸಂಕಟದಿಂದ ನನಗೆ ನೆಮ್ಮದಿಯನ್ನು ನೀಡಿರಿ; ನನ್ನನ್ನು ಕರುಣಿಸಿ, ನನ್ನ ಪ್ರಾರ್ಥನೆಯನ್ನು ಕೇಳಿರಿ.
2ಓ ಮಾನವ, ನೀನು ಎಲ್ಲಿಯತನಕ ನನ್ನ ಮಹಿಮೆಯನ್ನು ಅವಮಾನಕ್ಕೆ ಗುರಿಪಡಿಸುವಿ? ನೀನು ಎಲ್ಲಿಯತನಕ ವ್ಯರ್ಥವಾದದ್ದನ್ನು ಪ್ರೀತಿಸಿ, ಸುಳ್ಳನ್ನು ಹುಡುಕುವಿ?
3ಯೆಹೋವ ದೇವರು ತಮ್ಮ ನಂಬಿಗಸ್ತರನ್ನು ತಮಗಾಗಿ ಪ್ರತ್ಯೇಕಿಸಿದ್ದಾರೆ ಎಂದು ತಿಳಿದುಕೊಳ್ಳಿರಿ; ನಾನು ಬೇಡಿಕೊಳ್ಳಲು ಯೆಹೋವ ದೇವರು ನನಗೆ ಉತ್ತರ ನೀಡುವರು.
4ನಡುಗಿರಿ, ಪಾಪಮಾಡಬೇಡಿರಿ; ನೀವು ನಿಮ್ಮ ಹಾಸಿಗೆಯ ಮೇಲೆ ಇರುವಾಗ, ನಿಮ್ಮ ಹೃದಯಗಳಲ್ಲಿ ಧ್ಯಾನಮಾಡಿ ಮೌನವಾಗಿರಿ.
5ನೀತಿಯ ಬಲಿಗಳನ್ನು ಅರ್ಪಿಸಿರಿ ಯೆಹೋವ ದೇವರಲ್ಲಿ ನಿಮ್ಮ ಭರವಸೆಯನ್ನು ಇಡಿರಿ.
6ಯೆಹೋವ ದೇವರೇ, “ನಮಗೆ ಒಳ್ಳೆಯದನ್ನು ಮಾಡುವವರು ಯಾರು?” ಎಂದು ಕೇಳುವವರು ಅನೇಕರಿದ್ದಾರೆ. ನಿಮ್ಮ ಮುಖಪ್ರಕಾಶವು ನಮ್ಮ ಮೇಲೆ ಬೆಳಗಲಿ.
7ಧಾನ್ಯವೂ ಹೊಸ ದ್ರಾಕ್ಷಾರಸವೂ ಸುಗ್ಗಿಕಾಲದಲ್ಲಿ ಸಮೃದ್ಧಿಯಾದಾಗ ಇರುವುದಕ್ಕಿಂತಲೂ ಅಧಿಕವಾದ ಆನಂದವನ್ನು ನೀವು ನನ್ನ ಹೃದಯದಲ್ಲಿ ಇಟ್ಟಿದ್ದೀರಿ.
8ಸಮಾಧಾನವಾಗಿ ಮಲಗಿ ನಿದ್ರೆ ಮಾಡುವೆನು, ಏಕೆಂದರೆ ಯೆಹೋವ ದೇವರೇ, ನೀವೊಬ್ಬರೇ ನನ್ನನ್ನು ಸುರಕ್ಷಿತವಾಗಿ ವಾಸಿಸುವಂತೆ ಮಾಡುತ್ತೀರಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.