An accused exile follows beams of light toward Jerusalem and waiting harp music

ಕೀರ್ತನೆಗಳು 43

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 43 ಮೋಸದ ವಿರೋಧದಿಂದ ನಿರ್ದೋಷತ್ವ ಸಾಬೀತನ್ನು ಬಯಸಿ, ತಿರಸ್ಕಾರವು ಏಕೆ ಇಷ್ಟು ನಿಜವೆನಿಸುತ್ತದೆ ಎಂದು ಕೇಳುತ್ತದೆ. ಬೆಳಕೂ ಸತ್ಯವೂ ಪವಿತ್ರ ಬೆಟ್ಟಕ್ಕೆ ಮರಳುವ ಮಾರ್ಗದರ್ಶಿಗಳಾಗುತ್ತವೆ, ಅಲ್ಲಿ ಕುಗ್ಗಿದ ಆತ್ಮವು ನವೀಕೃತ ಆರಾಧನೆಯನ್ನೂ ಸ್ತುತಿಯನ್ನೂ ನಿರೀಕ್ಷಿಸುತ್ತದೆ.
ಮಾರ್ಗದರ್ಶನನಿರ್ದೋಷತ್ವ ಸಾಬೀತುಆರಾಧನೆನಿರೀಕ್ಷೆ
1ದೇವರೇ, ನನ್ನನ್ನು ನಿರ್ದೋಷಿ ಎಂದು ನಿರ್ಣಯಿಸಿರಿ, ಭಕ್ತಿಹೀನ ಜನತೆಯ ವಿರೋಧವಾಗಿ ನನ್ನ ನ್ಯಾಯವನ್ನು ವಾದಿಸಿರಿ. ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸಿರಿ.
2ನೀವು ನನ್ನ ದೇವರು, ನನ್ನ ಬಲವಾದ ಕೋಟೆಯು; ನೀವು ಏಕೆ ನನ್ನನ್ನು ತಳ್ಳಿಬಿಟ್ಟಿದ್ದೀರಿ? ಏಕೆ ನಾನು ಶತ್ರುವಿನ ಬಾಧೆಯಿಂದ ದುಃಖದಲ್ಲಿ ನಡೆದುಕೊಳ್ಳಬೇಕು?
3ನಿಮ್ಮ ಬೆಳಕನ್ನೂ ನಿಮ್ಮ ಸತ್ಯವನ್ನೂ ಕಳುಹಿಸಿರಿ; ಅವು ನನ್ನನ್ನು ನೀವು ವಾಸಿಸುವ ನಿಮ್ಮ ಪರಿಶುದ್ಧ ಪರ್ವತಕ್ಕೆ ನನ್ನನ್ನು ಬರಮಾಡಲಿ.
4ದೇವರೇ, ನನ್ನ ದೇವರೇ, ಆಗ ನಿಮ್ಮ ಬಲಿಪೀಠದ ಬಳಿಗೆ ಬರುವೆನು. ನನ್ನ ಸಂತೋಷವೂ ಹರ್ಷವೂ ಆಗಿರುವ ನಿಮ್ಮ ಬಳಿಗೂ ಬಂದು, ಕಿನ್ನರಿಯಿಂದ ನಿಮ್ಮನ್ನು ಕೊಂಡಾಡುವೆನು.
5ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.