
ಕೀರ್ತನೆಗಳು 46
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಭೂಮಿ, ಪರ್ವತಗಳು, ಸಮುದ್ರಗಳು, ಜನಾಂಗಗಳು ಮತ್ತು ರಾಜ್ಯಗಳು ಕದಡಿದಾಗ ದೇವರು ಸನ್ನಿಹಿತ ಆಶ್ರಯ ಎಂದು ಕೀರ್ತನೆ 46 ಘೋಷಿಸುತ್ತದೆ. ಜೀವದಾಯಕ ನದಿಯು ಪಟ್ಟಣವನ್ನು ಸ್ಥಿರಗೊಳಿಸುತ್ತದೆ, ಯುದ್ಧವು ಕೊನೆಗೊಳಿಸಲ್ಪಡುತ್ತದೆ, ಮತ್ತು ಭಯಪಟ್ಟ ಜನರನ್ನು ಶಾಂತತೆಗೆ ಕರೆಯಲಾಗುತ್ತದೆ.
ಆಶ್ರಯಶಾಂತಿಶಾಂತತೆಕದಡುವಿಕೆ
1ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ; ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.
2ಆದ್ದರಿಂದ ಭೂಮಿಯು ಕಂಪಿಸಿದರೂ ಬೆಟ್ಟಗಳು ಸಮುದ್ರದಲ್ಲಿ ಮುಳುಗಿದರೂ,
3ಅದರ ಸಮುದ್ರವು ಘೋಷಿಸಿ ನೊರೆಕಾರಿದರೂ, ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು.
4ಒಂದು ನದಿ ಇದೆ; ಅದರ ಕಾಲುವೆಗಳು ದೇವರು ವಾಸಿಸುವ ಮಹೋನ್ನತ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
5ದೇವರು ಅದರ ಮಧ್ಯದಲ್ಲಿ ಇದ್ದಾರೆ, ಅದು ಕದಲದು; ದೇವರು ಉದಯಕಾಲದಲ್ಲಿ ಅದಕ್ಕೆ ಸಹಾಯ ಮಾಡುವರು.
6ರಾಷ್ಟ್ರಗಳು ಕೋಲಾಹಲದಲ್ಲಿವೆ ರಾಜ್ಯಗಳು ಬೀಳುತ್ತವೆ. ದೇವರು ತಮ್ಮ ಧ್ವನಿಯನ್ನೆತ್ತಲು ಭೂಮಿಯು ಕರಗುತ್ತದೆ.
7ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.
8ಬನ್ನಿರಿ, ಯೆಹೋವ ದೇವರ ಕಾರ್ಯಗಳನ್ನು ನೋಡಿರಿ. ಅವರು ಭೂಮಿಯಲ್ಲಿ ಎಂಥಾ ಅತಿಶಯಗಳನ್ನು ಉಂಟುಮಾಡಿದ್ದಾರೆ.
9ದೇವರು ಯುದ್ಧಗಳನ್ನು ಭೂಮಿಯ ಅಂತ್ಯದವರೆಗೆ ನಿಲ್ಲಿಸುತ್ತಾರೆ. ಬಿಲ್ಲನ್ನೂ ಭಲ್ಲೆಯನ್ನೂ ಮುರಿದು ಹಾಕಿದ್ದಾರೆ. ರಥಗಳನ್ನು ಬೆಂಕಿಯಿಂದ ಸುಡುತ್ತಾರೆ.
10“ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
11ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.