
ಕೀರ್ತನೆಗಳು 53
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 53 ಭ್ರಷ್ಟ ನಡತೆ, ಸಾರ್ವತ್ರಿಕ ವೈಫಲ್ಯ ಮತ್ತು ದುರ್ಬಲ ಜನರ ಶೋಷಣೆಯ ಮೂಲಕ ಪ್ರಾಯೋಗಿಕ ನಾಸ್ತಿಕತೆಯನ್ನು ವರ್ಣಿಸುತ್ತದೆ. ಆದರೂ ಅನ್ಯಾಯದ ಅಧಿಕಾರವನ್ನು ಗಾಬರಿ ಆವರಿಸುತ್ತದೆ, ಮತ್ತು ಬಾಧಿತ ಸಮುದಾಯವು ಚೀಯೋನಿನಿಂದ ಬರುವ ಪುನಃಸ್ಥಾಪನೆಗಾಗಿ ಹಂಬಲಿಸುತ್ತಲೇ ಇರುತ್ತದೆ.
ಮೂರ್ಖತನಭ್ರಷ್ಟತೆಬಡವರುಪುನಃಸ್ಥಾಪನೆ
1“ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋದವರು ಅವರ ಮಾರ್ಗಗಳು ಅಸಹ್ಯಕರ. ಅವರಲ್ಲಿ ಒಳ್ಳೆಯದನ್ನು ಮಾಡುವವರು ಒಬ್ಬರೂ ಇಲ್ಲ.
2ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ದೇವರು ಸ್ವರ್ಗದಿಂದ ಮನುಷ್ಯರ ಮೇಲೆ ದೃಷ್ಟಿಸಿದರು.
3ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ, ಒಬ್ಬರಾದರೂ ಇಲ್ಲ. ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದರು.
4ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಅವರು ದೇವರನ್ನು ಸ್ಮರಿಸುವುದೇ ಇಲ್ಲ.
5ಭಯವಿಲ್ಲದಿರುವಲ್ಲಿ ಅವರು ಭಯಭ್ರಾಂತರಾದರು; ಏಕೆಂದರೆ ನಿಮಗೆ ವಿರೋಧವಾಗಿ ದಂಡು ಇಳಿಸುವವರನ್ನು ದೇವರು ಚದರಿಸಿಬಿಟ್ಟಿದ್ದಾರೆ. ನೀವು ಅವರನ್ನು ನಾಚಿಕೆಪಡಿಸಿದ್ದೀರಿ. ಏಕೆಂದರೆ ದೇವರು ಅವರನ್ನು ತಿರಸ್ಕರಿಸಿದ್ದಾರೆ.
6ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.