
ಕೀರ್ತನೆಗಳು 56
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 56 ವೈರಿಗಳು ಗಮನಿಸಿ ಮಾತುಗಳನ್ನು ತಿರುಚುವ ಫಿಲಿಷ್ಟಿಯರ ನಡುವಿನ ಸೆರೆಯಿಂದ ಮಾತನಾಡುತ್ತದೆ. ಭಯವನ್ನು ನಿರಾಕರಿಸದೆ ಒಪ್ಪಿಕೊಳ್ಳಲಾಗುತ್ತದೆ, ಕಣ್ಣೀರು ನೆನಪಿಸಲ್ಪಡುತ್ತದೆ, ಮತ್ತು ಮಾನವ ಬೆದರಿಕೆಗಳು ಕೊನೆಗೆ ಗೆಲ್ಲಲಾರವು ಎಂಬ ಭರವಸೆಯಾಗಿ ನಂಬಿಕೆ ಬೆಳೆಯುತ್ತದೆ.
ಭಯಭರವಸೆಕಣ್ಣೀರುವಿಮೋಚನೆ
1ದೇವರೇ ಕರುಣಿಸು, ಏಕೆಂದರೆ ಮನುಷ್ಯರು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ದಿನವೆಲ್ಲಾ ವಿರೋಧಿಸುತ್ತಾ ನನ್ನನ್ನು ಬಾಧಿಸುತ್ತಿದ್ದಾರೆ.
2ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಗರ್ವದಿಂದ ನನಗೆ ವಿರೋಧವಾಗಿ ಯುದ್ಧ ಮಾಡುತ್ತಿದ್ದಾರೆ.
3ನಾನು ಭಯಪಡುವ ಸಮಯದಲ್ಲಿ ನಿಮ್ಮಲ್ಲಿ ಭರವಸೆ ಇಡುವೆನು.
4ದೇವರ ಮಾತುಗಳಲ್ಲಿ ನಾನು ಹೆಮ್ಮೆಪಡುವೆನು. ದೇವರಲ್ಲಿಯೇ ಭರವಸೆ ಇಡುವೆನು, ನಾನು ಭಯಪಡುವುದಿಲ್ಲ. ಸಾಯುವ ಮನುಷ್ಯನು ನನಗೇನು ಮಾಡಬಲ್ಲ?
5ಶತ್ರುಗಳು ನನ್ನ ಮಾತುಗಳನ್ನು ಸದಾ ಅಪಾರ್ಥ ಮಾಡಿಕೊಳ್ಳುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ಕೇಡಿಗಾಗಿವೆ.
6ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ. ನನ್ನ ಪ್ರಾಣ ತೆಗೆಯಲು ಕುತೂಹಲದಿಂದ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
7ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ದೇವರೇ ಜನರನ್ನು ಕಠಿಣವಾಗಿ ದಂಡಿಸಿರಿ.
8ನನ್ನ ಗೋಳಾಟವನ್ನು ಎಣಿಕೆ ಮಾಡಿರಿ, ನಿಮ್ಮ ಸುರುಳಿಯಲ್ಲಿ ನನ್ನ ಕಣ್ಣೀರ ಲೆಕ್ಕಮಾಡಿರಿ, ಅವು ನಿಮ್ಮ ಗ್ರಂಥದಲ್ಲಿ ಬರೆದಿದೆಯಲ್ಲವೇ?
9ನಾನು ನಿಮಗೆ ಮೊರೆಯಿಟ್ಟಾಗ, ನನ್ನ ಶತ್ರುಗಳು ಹಿಂದಿರುಗುವರು. ಇದರಿಂದ ದೇವರು ನನಗಿದ್ದಾರೆ ಎಂಬುದನ್ನು ತಿಳಿದುಕೊಳ್ಳುವೆನು.
10ನಾನು ದೇವರಲ್ಲಿಯೂ ದೇವರ ವಾಕ್ಯದಲ್ಲಿಯೂ ಹೆಮ್ಮೆಪಡುವೆನು. ಹೌದು, ದೇವರಲ್ಲಿಯೂ ಯೆಹೋವ ದೇವರ ವಾಕ್ಯದಲ್ಲಿಯೂ ಹೆಮ್ಮೆಪಡುವೆನು.
11ನಾನು ದೇವರಲ್ಲಿ ಭರವಸೆಯಿಡುವೆನು. ನಾನು ಭಯಪಡುವುದಿಲ್ಲ. ಮಾನವನು ನನಗೇನು ಮಾಡುವನು?
12ನನ್ನ ದೇವರೇ ನಾನು ನಿಮಗೆ ಸಲ್ಲಿಸಿದ ಹರಕೆಗಳಿಗೆ ಅಧೀನವಾಗಿದ್ದೇನೆ. ನಾನು ಉಪಕಾರ ಸ್ತುತಿಯ ಕಾಣಿಕೆಗಳನ್ನು ನಿಮಗೆ ಸಲ್ಲಿಸುವೆನು.
13ಏಕೆಂದರೆ ನೀವು ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀರಿ. ನಾನು ಜೀವದ ಬೆಳಕಿನಲ್ಲಿ ನಿಮ್ಮ ಮುಂದೆ ನಡೆದುಕೊಳ್ಳುವ ಹಾಗೆ ನೀವು ನನ್ನ ಪಾದಗಳನ್ನು ಎಡವದಂತೆ ಕಾಪಾಡಿದ್ದೀರಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.