
ಕೀರ್ತನೆಗಳು 58
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 58 ಅನ್ಯಾಯವನ್ನು ಉತ್ಪಾದಿಸಿ ತಿದ್ದುಪಡಿಗೆ ಕಿವುಡಾಗಿ ಉಳಿಯುವ ಆಡಳಿತಗಾರರನ್ನು ಖಂಡಿಸುತ್ತದೆ. ಅದರ ತೀವ್ರ ಕಾವ್ಯಚಿತ್ರಗಳು ಬೇರೂರಿದ ಹಾನಿಯ ಅಂತ್ಯವನ್ನು ಬೇಡುತ್ತವೆ, ಇದರಿಂದ ನೀತಿಯ ನ್ಯಾಯತೀರ್ಪು ನಿಜವಾಗಿ ಮುಖ್ಯವೆಂದು ಸಮುದಾಯಗಳು ನೋಡಬಹುದು.
ನ್ಯಾಯಭ್ರಷ್ಟ ಆಡಳಿತಗಾರರುನ್ಯಾಯತೀರ್ಪುಸಮುದಾಯ
1ಜನನಾಯಕರೇ, ನೀವು ನ್ಯಾಯವಾಗಿ ತೀರ್ಪನ್ನು ನುಡಿಯುತ್ತೀರೋ? ಜನರಲ್ಲಿ ನೀವು ಯಥಾರ್ಥವಾಗಿ ನ್ಯಾಯತೀರಿಸುವಿರೋ?
2ಇಲ್ಲಾ, ನಿಮ್ಮ ಹೃದಯದಲ್ಲಿ ದುಷ್ಟತನವನ್ನು ಕಲ್ಪಿಸುತ್ತೀರಲ್ಲಾ, ದೇಶದಲ್ಲಿ ನಿಮ್ಮ ಕೈಗಳಿಂದ ಹಿಂಸಾಚಾರವನ್ನು ತೂಗುತ್ತೀರಲ್ಲಾ.
3ದುಷ್ಟರು ಗರ್ಭದಿಂದಲೇ ದಾರಿತಪ್ಪುತ್ತಾರೆ. ಹುಟ್ಟಿದಂದಿನಿಂದಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.
4ಹಾವಿನ ವಿಷದ ಹಾಗೆ ಅವರಲ್ಲಿ ವಿಷ ಇದೆ. ಘಟಸರ್ಪದ ಹಾಗೆ ಮಂದವಾಗಿದ್ದಾರೆ.
5ಚಮತ್ಕಾರದಿಂದ ಆಕರ್ಷಿಸಿ, ಕೌಶಲ್ಯದಿಂದ ನುಡಿಸುವ ಹಾವಾಡಿಗನ ನಾದವನ್ನು ಕೇಳದ ಹಾವಿನಂತೆ ಇದ್ದಾರೆ.
6ಓ, ದೇವರೇ, ಅವರ ಹಲ್ಲುಗಳು ಮುರಿದು ಬೀಳಲಿ. ಯೆಹೋವ ದೇವರೇ, ಪ್ರಾಯದ ಸಿಂಹಗಳಂತಿರುವ ಅವರ ಕೋರೆಹಲ್ಲುಗಳು ನಾಶವಾಗಲಿ.
7ಅವರು ನೀರಿನಂತೆ ಕರಗಿಹೋಗಲಿ. ಅವರು ತಮ್ಮ ಬಾಣಗಳನ್ನು ಗುರಿಯಿಡುವಾಗ ಡೊಂಕಾಗಿ ಹೋಗಲಿ.
8ಕರಗುವ ಗೊಂಡೆ ಹುಳದಂತೆ ಅವರು ನಾಶವಾಗಲಿ. ದಿನತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ಕಾಣದಿರಲಿ.
9ಗಡಿಗೆಗಳು ಮುಳ್ಳಿನ ಬೆಂಕಿಯ ಶಾಖವನ್ನು ಇನ್ನೂ ಹಸಿಯಾಗಿ ಇಲ್ಲವೆ ಒಣಗಿರುವಾಗಲೇ, ಬಿರುಗಾಳಿ ಹಾರಿಸಿಬಿಡುವಂತೆ ಅವರಿಗೆ ಆಗಲಿ.
10ನೀತಿವಂತರು ದುಷ್ಟರಿಗಾಗುವ ಪ್ರತಿದಂಡನೆಯನ್ನು ಕಂಡು ಹಿಗ್ಗಿ ತಮ್ಮ ಪಾದಗಳನ್ನು ದುಷ್ಟನ ರಕ್ತದ ಮೇಲಿಡಲಿ.
11ಆಗ ಜನರು ಹೀಗೆ ಹೇಳಿಕೊಳ್ಳುವರು, “ನಿಶ್ಚಯವಾಗಿ ನೀತಿವಂತನಿಗೆ ಫಲವಿದೆ. ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯತೀರಿಸುವ ದೇವರು ಇದ್ದಾರೆ.”
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.