A distant traveler prays toward a high rock, fortified tower, and sheltering wings at sunset

ಕೀರ್ತನೆಗಳು 61

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 61 ಭೂಮಿಯ ಕಟ್ಟಕಡೆಯಿಂದ ಮಾನವ ಕೈಗೆಟುಕದ ಆಶ್ರಯದ ಕಡೆಗೆ ಕ್ಷೀಣ ಮೊರೆಯನ್ನು ಹೊತ್ತೊಯ್ಯುತ್ತದೆ. ಕೀರ್ತನೆಗಾರನು ಆಸರೆಯನ್ನು ಕೇಳಿ, ಸುರಕ್ಷಿತ ಬಾಧ್ಯತೆಯನ್ನು ನೆನಪಿಸಿಕೊಂಡು, ದೇವರ ನಂಬಿಗಸ್ತ ರಕ್ಷಣೆಯ ಕೆಳಗೆ ಶಾಶ್ವತ ಸ್ತುತಿಯನ್ನು ವಾಗ್ದಾನ ಮಾಡುತ್ತಾನೆ.
ಆಶ್ರಯಪ್ರಾರ್ಥನೆರಕ್ಷಣೆನಂಬಿಗಸ್ತಿಕೆ
1ದೇವರೇ, ನನ್ನ ಮೊರೆಯನ್ನು ಕೇಳಿರಿ. ನನ್ನ ಪ್ರಾರ್ಥನೆಯನ್ನು ಆಲಿಸಿರಿ.
2ನನ್ನ ಹೃದಯವು ಕುಂದಿ ಹೋಗಿರಲಾಗಿ ಭೂಮಿಯ ಅಂತ್ಯದಿಂದ ನಿಮಗೆ ಮೊರೆಯಿಡುತ್ತಿರುವೆನು. ನನಗಿಂತ ಎತ್ತರವಾದ ಬಂಡೆಗೆ ನನ್ನನ್ನು ನಡೆಸಿರಿ.
3ನೀವೇ ನನಗೆ ಆಶ್ರಯವಾಗಿದ್ದೀರಿ. ಶತ್ರುವಿಗೆ ಎದುರಾಗಿ ಬಲವಾದ ಬುರುಜಾಗಿದ್ದೀರಿ.
4ನಿಮ್ಮ ಗುಡಾರದಲ್ಲಿ ನಿತ್ಯವಾಗಿ ನಿವಾಸಿಸಲು ಹಾರೈಸುತ್ತಿದ್ದೇನೆ. ನಿಮ್ಮ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
5ದೇವರೇ, ನೀವು ನನ್ನ ಹರಕೆಗಳನ್ನು ಕೇಳಿದ್ದೀರಿ. ನಿಮ್ಮ ಹೆಸರಿಗೆ ಭಯಪಡುವವರಿಗೆ ಕೊಡುವ ಸೊತ್ತನ್ನು ನನಗೂ ಕೊಟ್ಟಿದ್ದೀರಿ.
6ಅರಸನ ಜೀವನದ ದಿನಗಳನ್ನು ಹೆಚ್ಚಿಸಿರಿ. ಆತನ ವರ್ಷಗಳನ್ನು ತಲತಲಾಂತರಗಳವರೆಗೆ ವೃದ್ಧಿಪಡಿಸಿರಿ.
7ಆತನು ಎಂದೆಂದಿಗೂ ದೇವರ ಮುಂದೆ ಆಳಿಕೆಮಾಡಲಿ. ಆತನನ್ನು ಕಾಯುವ ಹಾಗೆ ನಿಮ್ಮ ಪ್ರೀತಿ, ಸತ್ಯವನ್ನು ನೇಮಿಸಿರಿ.
8ಆಗ ನಾನು ನನ್ನ ಹರಕೆಗಳನ್ನು ದಿನದಿನವೂ ಸಲ್ಲಿಸುವೆನು. ನಿಮ್ಮ ಹೆಸರನ್ನು ನಾನು ಎಂದೆಂದಿಗೂ ಕೀರ್ತಿಸುವೆನು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.