
ಕೀರ್ತನೆಗಳು 62
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 62 ಒತ್ತಡಕ್ಕೆ ಶಾಂತ ಭರವಸೆಯಿಂದ ಉತ್ತರಿಸುತ್ತದೆ. ವೈರಿಗಳು ವಾಲಿದ ಗೋಡೆಯಂತೆ ದಾಳಿ ಮಾಡಿದರೂ ಸಮಾಜವು ಸ್ಥಾನ, ದರೋಡೆ ಅಥವಾ ಸಂಪತ್ತಿನಲ್ಲಿ ಭರವಸೆಯಿಟ್ಟರೂ, ಕೀರ್ತನೆಗಾರನು ಬಲವೂ ಸ್ಥಿರ ಪ್ರೀತಿಯೂ ಸೇರುವ ನಂಬಿಗಸ್ತ ಬಂಡೆಯಾದ ದೇವರೊಬ್ಬನಿಗಾಗಿಯೇ ಕಾಯುತ್ತಾನೆ.
ಭರವಸೆಕಾಯುವಿಕೆಆಶ್ರಯಸ್ಥಿರ ಪ್ರೀತಿ
1ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ, ನನ್ನ ರಕ್ಷಣೆಯು ದೇವರಿಂದಲೇ.
2ದೇವರು ಮಾತ್ರವೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.
3ಹಾನಿಮಾಡುವವರೇ, ಎಷ್ಟರವರೆಗೆ ನೀವು ದಾಳಿಮಾಡುವಿರಿ. ಬಾಗುವ ಗೋಡೆಯಂತೆಯೂ, ಅಲ್ಲಾಡುವ ಬೇಲಿಯಂತೆಯೂ ನನ್ನನ್ನು ಕೆಡವಲು ಯತ್ನಿಸುವಿರಾ?
4ಅವರು ನನ್ನನ್ನು ಉನ್ನತ ಸ್ಥಾನದಿಂದ ದಬ್ಬುವುದಕ್ಕೆ ಆಲೋಚಿಸುತ್ತಿದ್ದಾರೆ. ಅವರು ಸುಳ್ಳನ್ನು ಇಷ್ಟಪಡುತ್ತಾರೆ; ತಮ್ಮ ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುತ್ತಾರೆ.
5ಹೌದು, ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ. ನನ್ನ ನಿರೀಕ್ಷೆಯು ದೇವರಿಂದಲೇ.
6ದೇವರೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.
7ದೇವರು ನನ್ನ ರಕ್ಷಣೆಗೂ ನನ್ನ ಗೌರವಕ್ಕೂ ಆಧಾರವಾಗಿದ್ದಾರೆ. ದೇವರು ನನ್ನ ಬಲವಾದ ಬಂಡೆಯೂ ನನ್ನ ಆಶ್ರಯವೂ ಆಗಿದ್ದಾರೆ.
8ಜನರೇ, ಎಲ್ಲಾ ಕಾಲದಲ್ಲಿಯೂ ದೇವರಲ್ಲಿ ಭರವಸೆ ಇಡಿರಿ. ನಿಮ್ಮ ಹೃದಯವನ್ನು ದೇವರ ಮುಂದೆ ಒಯ್ಯಿರಿ. ದೇವರು ನಮಗೆ ಆಶ್ರಯವಾಗಿದ್ದಾರೆ.
9ಸಾಮಾನ್ಯ ಜನರು ಬರೀ ಉಸಿರೇ, ಉನ್ನತ ಜನರು ಬರೀ ಸುಳ್ಳೇ. ತಕ್ಕಡಿಯಲ್ಲಿ ತೂಗಿದರೆ ಅವರೇನೂ ಇಲ್ಲ, ಎಲ್ಲರೂ ಬರೀ ಉಸಿರೇ.
10ಅನ್ಯಾಯದ ಸುಲಿಗೆಯಲ್ಲಿ ಭರವಸೆ ಇಡಬೇಡಿರಿ. ಸೂರೆಮಾಡಿದ್ದರಲ್ಲಿ ಗರ್ವಪಡಬೇಡಿರಿ. ಆಸ್ತಿಯು ಹೆಚ್ಚಾದರೆ ಅದರ ಮೇಲೆ ಮನಸ್ಸಿಡಬೇಡಿರಿ.
11ಒಂದು ಸಾರಿ ದೇವರು ಮಾತನಾಡಿದ್ದಾರೆ. ನಾನು ಎರಡು ಸಾರಿ ಇದನ್ನು ಹೀಗೆಂದು ಕೇಳಿದ್ದೇನೆ: “ದೇವರೇ, ಶಕ್ತಿಯು ನಿಮಗೇ ಸೇರಿದೆ.
12ಯೆಹೋವ ದೇವರೇ, ನಿಮ್ಮಲ್ಲಿ ಒಡಂಬಡಿಕೆಯ ಪ್ರೀತಿ ಇದೆ. ನೀವು ಪ್ರತಿ ಮನುಷ್ಯನಿಗೂ ಅವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುತ್ತೀರಿ.”
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.