Humble worshipers rejoice beside a steady pillar while proud rulers face a dark cup of judgment

ಕೀರ್ತನೆಗಳು 75

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ನೇಮಿತ ಕಾಲದಲ್ಲಿ ನ್ಯಾಯತೀರ್ಪು ದೇವರದೇ ಆದ ಕಾರಣ ಕೀರ್ತನೆ 75 ಕೃತಜ್ಞತೆ ಸಲ್ಲಿಸುತ್ತದೆ. ಭೂಮಿ ಕಂಪಿಸಿದಾಗ ಅದರ ಕಂಬಗಳು ಸ್ಥಿರವಾಗಿರುತ್ತವೆ; ಅಹಂಕಾರಿ ಅಧಿಕಾರವನ್ನು ಎಚ್ಚರಿಸಲಾಗುತ್ತದೆ, ನ್ಯಾಯತೀರ್ಪಿನ ಪಾತ್ರೆ ಹಾದುಹೋಗುತ್ತದೆ, ಮತ್ತು ಗರ್ವಿಷ್ಠರು ತಗ್ಗಿಸಲ್ಪಡುತ್ತಾರೆ, ನೀತಿವಂತರು ಎತ್ತಲ್ಪಡುತ್ತಾರೆ.
ನ್ಯಾಯತೀರ್ಪುದೀನತೆನ್ಯಾಯಸ್ತುತಿ
1ನಿಮ್ಮನ್ನು ಕೊಂಡಾಡುತ್ತೇವೆ; ದೇವರೇ, ನಿಮ್ಮನ್ನು ಕೊಂಡಾಡುತ್ತೇವೆ; ಏಕೆಂದರೆ ಜನರು ನಿಮ್ಮ ನಾಮವನ್ನು ಜಪಿಸಿ, ನಿಮ್ಮ ಅದ್ಭುತಗಳನ್ನು ಕುರಿತು ಹೇಳುತ್ತಾರೆ.
2“ನಿಯಮಿತ ಸಮಯವನ್ನು ಆಯ್ದುಕೊಳ್ಳುವೆನು. ನ್ಯಾಯಕ್ಕೆ ಸರಿಯಾಗಿ ನ್ಯಾಯತೀರಿಸುವೆನು,
3ಭೂಮಿಯೂ ಅದರ ನಿವಾಸಿಗಳೆಲ್ಲರೂ ಬೆರಗಾಗಿದ್ದಾರೆ. ನಾನು ಅದರ ಸ್ತಂಭಗಳನ್ನು ನಿಲ್ಲಿಸಿದ್ದೇನೆ.
4‘ಅಹಂಕಾರದಿಂದ ವರ್ತಿಸಬೇಡಿರಿ,’ ಎಂದು ಅಹಂಕಾರಿಗೆ ಹೇಳುತ್ತೇನೆ. ‘ನಿಮ್ಮ ಕೊಂಬು ಎತ್ತಬೇಡಿರಿ,’ ಎಂದು ದುಷ್ಟರಿಗೆ ಹೇಳುವೆನು.
5ನಿಮ್ಮ ಕೊಂಬನ್ನು ಪರಲೋಕದ ಕಡೆಗೆ ಎತ್ತಬೇಡಿರಿ. ಹಟಮಾರಿತನದಿಂದ ಮಾತನಾಡಬೇಡಿರಿ,” ಎಂದು ನೀವು ಹೇಳಿದ್ದೀರಿ.
6ಏಕೆಂದರೆ ಉದ್ಧಾರವು ಪೂರ್ವದಿಂದಲೂ ಪಶ್ಚಿಮದಿಂದಲೂ ಅಲ್ಲ, ಇಲ್ಲವೆ ದಕ್ಷಿಣದ ಮರುಭೂಮಿಯಿಂದಲೂ ಬರುವುದಿಲ್ಲ.
7ಆದರೆ ದೇವರು ನ್ಯಾಯತೀರಿಸುವವರಾಗಿದ್ದಾರೆ. ದೇವರು ಒಬ್ಬನನ್ನು ತಗ್ಗಿಸುತ್ತಾರೆ, ಒಬ್ಬನನ್ನು ಎತ್ತುತ್ತಾರೆ.
8ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ. ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ. ಅದನ್ನು ಅವರು ಹೊಯ್ಯುತ್ತಾರೆ. ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
9ನಾನಾದರೋ ಸದಾ ವರ್ಣಿಸುವವನಾಗಿ ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುವೆನು.
10ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಹೋಗುವುದು. ಆದರೆ ನೀತಿವಂತನ ಕೊಂಬುಗಳು ಎತ್ತಲಾಗುವುದು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.