
ಕೀರ್ತನೆಗಳು 76
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 76 ಯೆಹೂದದಲ್ಲಿ ಪ್ರಸಿದ್ಧನೂ ಪ್ರತಿಯೊಂದು ಯುದ್ಧಾಯುಧದ ಮೇಲೆ ಮಹಿಮಾನ್ವಿತನೂ ಆದ ದೇವರನ್ನು ಕೊಂಡಾಡುತ್ತದೆ. ಆಡಳಿತಗಾರರನ್ನು ಮೌನಗೊಳಿಸುವ ಭಯಂಕರ ಶಕ್ತಿಯು ಶಾಂತಿಯನ್ನೂ ಸ್ಥಾಪಿಸುತ್ತದೆ, ಆರಾಧಕರನ್ನು ಭಯಭಕ್ತಿಯಿಂದ ತಮ್ಮ ಹರಕೆಗಳನ್ನು ಈಡೇರಿಸಲು ಸೆಳೆಯುತ್ತದೆ.
ಶಾಂತಿನ್ಯಾಯತೀರ್ಪುಆರಾಧನೆವಿಜಯ
1ಯೆಹೂದ ಪ್ರದೇಶದಲ್ಲಿ ದೇವರು ಸುಪ್ರಸಿದ್ಧರಾಗಿದ್ದಾರೆ. ಇಸ್ರಾಯೇಲಿನಲ್ಲಿ ದೇವರ ಹೆಸರು ಪ್ರಖ್ಯಾತವಾಗಿದೆ.
2ಸಾಲೇಮಿನಲ್ಲಿ ದೇವರ ಗುಡಾರವೂ ಚೀಯೋನಿನಲ್ಲಿ ಅವರ ವಾಸಸ್ಥಾನವೂ ಉಂಟು.
3ದೇವರು ಅಲ್ಲಿಯೇ ಬಿಲ್ಲಿನ ಉರಿಬಾಣಗಳನ್ನೂ ಗುರಾಣಿಯನ್ನೂ ಖಡ್ಗವನ್ನೂ ಯುದ್ಧಾಯುಧಗಳನ್ನು ಮುರಿದುಬಿಟ್ಟರು.
4ನೀವು ಪ್ರಕಾಶಮಾನ ಬೆಳಕಿಗಿಂತ ಪ್ರಕಾಶಮಾನವಾಗಿರುತ್ತೀರಿ, ನೈಸರ್ಗಿಕ ಸಂಪತ್ತು ತುಂಬಿದ ಪರ್ವತಗಳಿಗಿಂತ ಹೆಚ್ಚು ಶ್ರೇಷ್ಠ ಆಗಿದ್ದೀರಿ.
5ಧೀರಹೃದಯದವರು ಸುಲಿಗೆಯಾಗಿ, ಅಂತಿಮ ನಿದ್ರೆ ಹೊಂದಿದ್ದಾರೆ. ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗಳನ್ನೆತ್ತಲು ಶಕ್ತನಲ್ಲ.
6ಯಾಕೋಬನ ದೇವರೇ, ನಿಮ್ಮ ಗದರಿಕೆಯಿಂದ ರಥವೂ ಕುದುರೆಯೂ ಚಲನೆಯಿಲ್ಲದೆ ಬಿದ್ದಿವೆ.
7ನೀವು ಭಯಭಕ್ತಿಗೆ ಪಾತ್ರರು, ನೀವು ಒಂದು ಸಾರಿ ಬೇಸರಗೊಂಡರೆ, ನಿಮ್ಮ ಮುಂದೆ ನಿಲ್ಲುವವನ್ಯಾರು?
8ಪರಲೋಕದಿಂದ ನ್ಯಾಯ ನಿರ್ಣಯವನ್ನು ಮಾಡಿದ್ದೀರಿ. ದೇವರೇ, ನ್ಯಾಯತೀರಿಸುವುದಕ್ಕೂ
9ಭೂಮಿಯ ದೀನರೆಲ್ಲರನ್ನು ರಕ್ಷಿಸುವುದಕ್ಕೂ ನೀವು ಪ್ರಾರಂಭಿಸುವಾಗ ಭೂಮಿಯು ಭಯಗೊಂಡು ಮೌನವಾಯಿತು.
10ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.
11ನಿಮ್ಮ ದೇವರಾದ ಯೆಹೋವ ದೇವರಿಗೆ ಹರಕೆಮಾಡಿ ಸಲ್ಲಿಸಿರಿ. ದೇವರ ಸುತ್ತಲಿರುವವರೆಲ್ಲರು ಭಯಭಕ್ತಿಗೆ ಪಾತ್ರರಾದವರಿಗೆ ಕಾಣಿಕೆಗಳನ್ನು ತರಲಿ.
12ದೇವರು ಅಧಿಕಾರಿಗಳ ಗರ್ವವನ್ನು ಮುರಿಯುತ್ತಾರೆ. ಭೂಲೋಕದ ಅರಸರು ದೇವರಿಗೆ ಭಯಪಡುತ್ತಾರೆ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.