Priests sound ram's horns over harvest baskets while worshipers gather and a distant idol stands abandoned

ಕೀರ್ತನೆಗಳು 81

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 81 ಹಬ್ಬದ ಸಂಗೀತವನ್ನು ಒಡಂಬಡಿಕೆಯ ಎಚ್ಚರಿಕೆಯೊಂದಿಗೆ ಸೇರಿಸುತ್ತದೆ. ದಬ್ಬಾಳಿಕೆಯ ಭಾರಗಳನ್ನು ತೆಗೆದುಹಾಕಿದ ವಿಮೋಚಕನು ಜನರು ಕೇಳಲಿ, ಅನ್ಯ ದೇವರುಗಳನ್ನು ತಿರಸ್ಕರಿಸಲಿ, ನಂಬಿಗಸ್ತರಾಗಿ ನಡೆಯಲಿ ಮತ್ತು ಉದಾರ ಪೂರೈಕೆಯಿಂದ ತೃಪ್ತಿಕರ ಸಮೃದ್ಧಿಯನ್ನು ಪಡೆಯಲಿ ಎಂದು ಹಂಬಲಿಸುತ್ತಾನೆ.
ಹಬ್ಬವಿಧೇಯತೆವಿಮೋಚನೆಪೂರೈಕೆ
1ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿ ಗೈಯಿರಿ.
2ವಾದ್ಯ ಪ್ರಾರಂಭಿಸಿರಿ; ದಮ್ಮಡಿಯನ್ನೂ, ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ಬಾರಿಸಿರಿ.
3ಅಮಾವಾಸ್ಯೆಯಲ್ಲಿಯೂ ಉತ್ಸವ ದಿವಸವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.
4ಏಕೆಂದರೆ ಇದು ಇಸ್ರಾಯೇಲಿಗೆ ಕಟ್ಟಳೆ. ಯಾಕೋಬನ ದೇವರ ನ್ಯಾಯ ಪ್ರಮಾಣವೇ.
5ದೇವರು ಈಜಿಪ್ಟಿಗೆ ವಿರೋಧವಾಗಿ ಹೊರಟಾಗ, ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು. ನಾವು ತಿಳಿಯದ ಭಾಷೆಯನ್ನು ಕೇಳಿದಾಗ:
6“ಅವರ ಹೆಗಲ ಮೇಲಿಂದ ಭಾರವನ್ನು ತೆಗೆದುಹಾಕಿದೆನು, ಬುಟ್ಟಿಗಳಿಂದ ಅವರ ಕೈಗಳು ಬಿಡುಗಡೆಯಾದವು.
7ಇಕ್ಕಟ್ಟಿನಲ್ಲಿ ನೀವು ಕರೆಮಾಡಿದಿರಿ, ಆಗ ನಾನು ನಿಮ್ಮನ್ನು ವಿಮೋಚಿಸಿದೆನು. ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟೆನು. ಮೆರೀಬಾ ನೀರಿನ ಹತ್ತಿರ ನಿಮ್ಮನ್ನು ಪರೀಕ್ಷಿಸಿದೆನು.
8ನನ್ನ ಜನರೇ ಕೇಳಿರಿ, ಇಸ್ರಾಯೇಲೇ, ನೀನು ನನ್ನ ಮಾತನ್ನು ಕೇಳಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ.
9ನಿಮ್ಮಲ್ಲಿ ಅನ್ಯದೇವರು ಇರಬಾರದು; ಪರದೇವರಿಗೆ ಅಡ್ಡ ಬೀಳಬಾರದು.
10ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಯೆಹೋವ ದೇವರು ನಾನೇ; ನಿಮ್ಮ ಬಾಯಿಯನ್ನು ಅಗಲವಾಗಿ ತೆರೆ, ಆಗ ಅದನ್ನು ತುಂಬಿಸುವೆನು.
11“ಆದರೆ ನನ್ನ ಜನರು ನನ್ನ ಮಾತನ್ನು ಕೇಳಲಿಲ್ಲ; ಇಸ್ರಾಯೇಲು ನನಗೆ ಅಧೀನವಾಗಲಿಲ್ಲ.
12ಆದ್ದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಂತೆ ನಡೆದುಕೊಂಡರು.
13“ಹಾ, ನನ್ನ ಜನರು ನನ್ನ ಮಾತನ್ನು ಕೇಳಿದರೆ ಒಳ್ಳೆದಾಗಿತ್ತು! ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ ಮೇಲಾಗುತ್ತಿತ್ತು,
14ತೀವ್ರವಾಗಿ ಅವರ ಶತ್ರುಗಳನ್ನು ಧೀನಪಡಿಸುವೆನು. ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.
15ಯೆಹೋವ ದೇವರನ್ನು ದ್ವೇಷಿಸುವವರು ತಮ್ಮನ್ನು ತಾವೇ ದೇವರಿಗೆ ಒಪ್ಪಿಸಿಕೊಡುವರು. ಆದರೂ ಅವರಿಗೆ ಶಿಕ್ಷೆ ತಪ್ಪುವುದಿಲ್ಲ.
16ನಿಮಗಾದರೋ ಉತ್ತಮವಾದ ಗೋಧಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ನಿಮ್ಮನ್ನು ತೃಪ್ತಿಪಡಿಸುವೆನು.”

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.