
ಕೀರ್ತನೆಗಳು 93
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 93 ಗರ್ಜಿಸುವ ಸಮುದ್ರಗಳಿಗಿಂತ ಬಲಿಷ್ಠವಾದ ಮಹಿಮೆಯ ಆಳ್ವಿಕೆಯನ್ನು ಸಾರುತ್ತದೆ. ಲೋಕವು ಸ್ಥಿರವಾಗಿ ನಿಲ್ಲುತ್ತದೆ, ಪುರಾತನ ಅಧಿಕಾರವು ಅಲುಗಾಡದೆ ಉಳಿಯುತ್ತದೆ, ನಂಬಿಗಸ್ತ ಕಟ್ಟಳೆಗಳು ಬಾಳುತ್ತವೆ, ಮತ್ತು ಪವಿತ್ರತೆಯು ಆರಾಧನೆಯ ವಾಸಸ್ಥಳವನ್ನು ಸರಿಯಾಗಿ ಗುರುತಿಸುತ್ತದೆ.
ಸಾರ್ವಭೌಮತ್ವಮಹಿಮೆಸ್ಥಿರತೆಪವಿತ್ರತೆ
1ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ. ಬಲದಿಂದ ತಮ್ಮ ನಡುವನ್ನು ಕಟ್ಟಿಕೊಂಡಿದ್ದಾರೆ. ಆದುದರಿಂದ ಲೋಕವು ಸಹ ಸ್ಥಿರವಾಗಿದೆ, ಕದಲುವುದಿಲ್ಲ.
2ದೇವರೇ, ನಿಮ್ಮ ಸಿಂಹಾಸನವು ಪೂರ್ವಕಾಲದಿಂದ ಸ್ಥಿರವಾಗಿದೆ. ಯುಗಯುಗದಿಂದ ನೀವು ಇದ್ದೀರಿ.
3ಯೆಹೋವ ದೇವರೇ, ಸಮುದ್ರಗಳಲ್ಲಿ ಪ್ರವಾಹಗಳು ಮೊರೆಯುತ್ತಿವೆ. ಸಮುದ್ರಗಳು ತಮ್ಮ ಧ್ವನಿಯನ್ನು ಎತ್ತಿವೆ. ಸಮುದ್ರಗಳು ತಮ್ಮ ಅಲೆಗಳ ಘೋಷವನ್ನು ಎತ್ತಿವೆ.
4ಮಹಾಸಾಗರದ ಶಬ್ದಕ್ಕಿಂತಲೂ, ಸಮುದ್ರದ ಬಲವಾದ ಅಲೆಗಳಿಗಿಂತಲೂ ಉನ್ನತದಲ್ಲಿರುವ ಯೆಹೋವ ದೇವರು ಬಲಿಷ್ಠರಾಗಿದ್ದಾರೆ.
5ದೇವರೇ, ನಿಮ್ಮ ಶಾಸನಗಳು ಬಹಳ ನಿಶ್ಚಯವಾದವುಗಳು. ಯೆಹೋವ ದೇವರೇ, ಪರಿಶುದ್ಧತೆಯು ಸದಾಕಾಲ ನಿಮ್ಮ ಆಲಯವನ್ನು ಅಲಂಕರಿಸುತ್ತದೆ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.