
ಕೀರ್ತನೆಗಳು 97
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 97 ಬಿರುಗಾಳಿ, ಬೆಂಕಿ, ಮಿಂಚು ಮತ್ತು ಪರ್ವತಗಳ ಮೂಲಕ ಸಾರ್ವಭೌಮ ಆಳ್ವಿಕೆಯನ್ನು ಚಿತ್ರಿಸಿ, ವಿಗ್ರಹಗಳನ್ನೂ ಸುಳ್ಳು ಆರಾಧನೆಯನ್ನೂ ತಗ್ಗಿಸುತ್ತದೆ. ನ್ಯಾಯವೂ ನೀತಿಯೂ ಈ ಆಳ್ವಿಕೆಯನ್ನು ಆಧರಿಸುತ್ತವೆ, ಮತ್ತು ನಂಬಿಗಸ್ತ ಹೃದಯಗಳಿಗಾಗಿ ಬೆಳಕೂ ಸಂತೋಷವೂ ಬಿತ್ತಲ್ಪಡುತ್ತವೆ.
ಸಾರ್ವಭೌಮತ್ವನ್ಯಾಯವಿಗ್ರಹಗಳುಸಂತೋಷ
1ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋಷಪಡಲಿ.
2ಮೇಘಗಳೂ, ಕಾರ್ಗತ್ತಲೂ ಅವರ ಸುತ್ತಲು ಇವೆ; ನೀತಿಯೂ, ನ್ಯಾಯವೂ ಅವರ ಸಿಂಹಾಸನದ ಅಸ್ತಿವಾರವಾಗಿದೆ.
3ಬೆಂಕಿಯು ಅವರ ಮುಂದೆ ಹೋಗಿ ಅವರ ವೈರಿಗಳನ್ನು ಸುತ್ತಲೂ ದಹಿಸುವುದು.
4ಅವರ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ಕಂಡು ನಡುಗುತ್ತದೆ.
5ಯೆಹೋವ ದೇವರ ಸನ್ನಿಧಿಯಲ್ಲಿ ಬೆಟ್ಟಗಳು ಕರಗುತ್ತವೆ, ಸಮಸ್ತ ಭೂಮಿಯು ಮೇಣದ ಹಾಗೆ ಕರಗುತ್ತವೆ.
6ಆಕಾಶವು ಅವರ ನೀತಿಯನ್ನು ತಿಳಿಸುತ್ತದೆ; ಎಲ್ಲಾ ಜನಗಳು ಅವರ ಮಹಿಮೆಯನ್ನು ಕಾಣುತ್ತಾರೆ.
7ವಿಗ್ರಹಗಳನ್ನು ಪೂಜಿಸಿ, ವಿಗ್ರಹಗಳಲ್ಲಿ ಹೆಮ್ಮೆ ಪಡುವವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಯೆಹೋವ ದೇವರನ್ನು ಆರಾಧಿಸಿರಿ!
8ಯೆಹೋವ ದೇವರೇ, ನಿಮ್ಮ ನ್ಯಾಯಗಳನ್ನು ಚೀಯೋನ್ ಪಟ್ಟಣವು ಕೇಳಿ ಸಂತೋಷಿಸಿತು; ಯೆಹೂದದ ಪುತ್ರಿಯರು ಸಹ ಉಲ್ಲಾಸಿಸುತ್ತಾರೆ.
9ಏಕೆಂದರೆ ಯೆಹೋವ ದೇವರೇ, ನೀವು ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ; ಎಲ್ಲಾ ದೇವರುಗಳ ಮೇಲೆ ನೀವು ಅತ್ಯಂತ ಮಹೋನ್ನತರಾಗಿದ್ದೀರಿ.
10ಯೆಹೋವ ದೇವರನ್ನು ಪ್ರೀತಿಸುವವರು ಕೆಟ್ಟದ್ದನ್ನು ಹಗೆ ಮಾಡುವರು; ದೇವರು ತಮ್ಮ ಭಕ್ತರ ಪ್ರಾಣಗಳನ್ನು ಕಾಪಾಡಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವರು.
11ನೀತಿವಂತನಿಗೋಸ್ಕರ ಬೆಳಕೂ, ಯಥಾರ್ಥ ಹೃದಯದವರಿಗೋಸ್ಕರ ಅವರ ಹೃದಯದಲ್ಲಿ ಆನಂದವೂ ಇರುವುದು.
12ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ; ದೇವರ ಪರಿಶುದ್ಧ ನಾಮವನ್ನು ಕೊಂಡಾಡಿರಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.
Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.