Priests and families bow before the veiled ark between cherubim as incense rises in the sanctuary

ಕೀರ್ತನೆಗಳು 99

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಅಧ್ಯಾಯ ಸಾರಾಂಶ
ಕೀರ್ತನೆ 99 ಅತೀತ ಪವಿತ್ರತೆಯನ್ನು ಸ್ಪಂದಿಸುವ ಸಂಬಂಧದೊಂದಿಗೆ ಜೋಡಿಸುತ್ತದೆ. ನೀತಿವಂತ ಅರಸನು ಸಮಾನತೆಯನ್ನು ಪ್ರೀತಿಸುತ್ತಾನೆ, ಮತ್ತು ಮೋಶೆ, ಆರೋನ ಮತ್ತು ಸಮುಯೇಲರು ಸಮುದಾಯದ ಆರಾಧನೆಯ ಮೊದಲು ಉತ್ತರಗಳನ್ನೂ ಕ್ಷಮೆಯನ್ನೂ ಅಗತ್ಯ ಶಿಸ್ತನ್ನೂ ಪಡೆಯುವ ಪ್ರಾರ್ಥನೆಗೆ ಮಾದರಿಯಾಗುತ್ತಾರೆ.
ಪವಿತ್ರತೆನ್ಯಾಯಪ್ರಾರ್ಥನೆಕ್ಷಮೆ
1ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ.
2ಯೆಹೋವ ದೇವರು ಚೀಯೋನಿನಲ್ಲಿ ಮಹೋನ್ನತರಾಗಿದ್ದಾರೆ. ಎಲ್ಲಾ ಜನಗಳ ಮೇಲೆ ಉನ್ನತರಾಗಿದ್ದಾರೆ.
3ನಿಮ್ಮ ಅತಿಶಯವಾದ ಹೆಸರನ್ನು ಜನರು ಕೊಂಡಾಡಲಿ. ದೇವರು ಪರಿಶುದ್ಧರು.
4ನ್ಯಾಯ ಪ್ರಿಯ ರಾಜರೇ, ನೀವು ನೀತಿಯನ್ನು ಸ್ಥಿರಪಡಿಸುತ್ತೀರಿ. ನ್ಯಾಯವನ್ನೂ ನೀತಿಯನ್ನೂ ಯಾಕೋಬ್ಯರಲ್ಲಿ ನೀವು ಮನದಟ್ಟಾಗಿಸಿರುವಿರಿ.
5ನಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ಅವರ ಪಾದಪೀಠದಲ್ಲಿ ಆರಾಧಿಸಿರಿ. ಏಕೆಂದರೆ ಅವರು ಪರಿಶುದ್ಧರಾಗಿದ್ದಾರೆ.
6ಯೆಹೋವ ದೇವರ ಯಾಜಕರಲ್ಲಿ ಮೋಶೆಯೂ ಆರೋನನೂ ಇದ್ದಾರೆ. ದೇವರ ಹೆಸರೆತ್ತಿ ಕರೆದವರಲ್ಲಿ ಸಮುಯೇಲನೂ ಸಹ ಒಬ್ಬನು. ಇವರೆಲ್ಲರೂ ಯೆಹೋವ ದೇವರನ್ನು ಕರೆದರು. ದೇವರು ಅವರಿಗೆ ಉತ್ತರಕೊಟ್ಟರು.
7ಮೇಘಸ್ತಂಭದಿಂದ ಅವರ ಸಂಗಡ ಮಾತನಾಡಿದರು. ದೇವರು ಅವರಿಗೆ ಕೊಟ್ಟ ಶಾಸನಗಳನ್ನೂ ತೀರ್ಪುಗಳನ್ನೂ ಅವರು ಕೈಗೊಂಡರು.
8ನಮ್ಮ ದೇವರಾದ ಯೆಹೋವ ದೇವರೇ, ನೀವು ಅವರಿಗೆ ಉತ್ತರಕೊಟ್ಟಿದ್ದೀರಿ. ನೀವು ದುಷ್ಕೃತ್ಯಗಳಿಗಾಗಿ ಇಸ್ರಾಯೇಲರನ್ನು ದಂಡಿಸಿದರೂ ಅವರನ್ನು ಕ್ಷಮಿಸುವ ದೇವರಾಗಿದ್ದೀರಿ.
9ನಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ದೇವರ ಪರಿಶುದ್ಧ ಪರ್ವತದಲ್ಲಿ ಆರಾಧಿಸಿರಿ. ನಮ್ಮ ದೇವರಾದ ಯೆಹೋವ ದೇವರು ಪರಿಶುದ್ಧರು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ — CC BY-SA 4.0. Where these translations come from.

Copyright © 1999, 2020, 2022 by Biblica, Inc. Available free at biblica.com and open.bible. Text unchanged, used under CC BY-SA 4.0.